ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಅಕ್ಟೋಬರ್ 22: ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಮನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ನಗರದಲ್ಲಿ ಶನಿವಾರದವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಗರದಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ. ಪರಿಣಾಮ ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ.

ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಮೈಸೂರಿನಲ್ಲಿ ಗುರುವಾರ 8 ಸೆಂ.ಮೀ, ಕೋಲಾರ ಜಿಲ್ಲೆ ರಾಯಲ್ಪಾಡುವಿನಲ್ಲಿ 6 ಸೆಂ.ಮೀ ಮಳೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು, ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ, ಶ್ರೀರಂಗಪಟ್ಟಣ, ಕೊಡಗು ಜಲ್ಲೆಯ ಹಾರಂಗಿ ಹಾಗೂ ಉಡುಪಿ ಜಿಲ್ಲೆಯ ಕೋಟಾದಲ್ಲಿ ತಲಾ 5 ಸೆಂ.ಮೀ, ಹಾವೇರಿ ಜಿಲ್ಲೆ ಸವಣೂರಿನಲ್ಲಿ2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಎರಡು ವರ್ಷಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಎರಡನೇ ಬಾರಿಗೆ ಭೂ ಕುಸಿತವಾಗಿದೆ. ಈ ಹಿಂದೆ 2019ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿತ್ತು. ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಪಾಂಡವಪುರ, ಮೈಸೂರು, ಮಂಡ್ಯ, ನಾಗನಹಳ್ಳಿ, ತಿಪಟೂರು, ರಾಯಲ್‌ಪಾಡು, ಕೋಟ, ಶ್ರೀರಂಗಪಟ್ಟಣ, ಚಿಕ್ಕಮಗಳೂರು, ಹಾರಂಗಿ, ಚಿಂತಾಮಣಿ, ಮೂಡುಬಿದಿರೆ, ವಿರಾಜಪೇಟೆ, ಮಲವಳ್ಳಿ, ಹಾಸನ, ಸರಗೂರು, ಪೊನ್ನಂಪೇಟೆ, ಧರ್ಮಸ್ಥಳ, ಮಾಣಿ, ಉಡುಪಿ , ಶ್ರೀಮಂಗಲ, ಸುಂಟಿಕೊಪ್ಪ, ಸೋಮವಾರಪೇಟೆ, ಶ್ರೀನಿವಾಸಪುರ, ಕಳಸ, ಸಾಲಿಗ್ರಾಮ, ಬಂಟವಾಳ, ಸುಬ್ರಹ್ಮಣ್ಯ, ಪುತ್ತೂರು, ವಿಟ್ಲ, ಮುಲ್ಕಿ, ಜಯಪುರ, ಬಂಡೀಪುರ, ಬುಕ್ಕಾಪಟ್ಟಣ, ಚಾಮರಾಜನಗರ, ಕೊಟ್ಟಿಗೆಹಾರ,ಆಗುಂಬೆ, ತಿ ನರಸೀಪುರ, ಮಾಗಡಿಯಲ್ಲಿ ಮಳೆಯಾಗಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯ ಹವಾಮಾನ ವರದಿ

ರಾಜ್ಯ ಹವಾಮಾನ ವರದಿ

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

 ಅತಿ ಹೆಚ್ಚು ಉಷ್ಣಾಂಶ ದಾಖಲಾಗಿರುವ ಪ್ರದೇಶ

ಅತಿ ಹೆಚ್ಚು ಉಷ್ಣಾಂಶ ದಾಖಲಾಗಿರುವ ಪ್ರದೇಶ

ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್‌ನಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+