ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರಿ ಮಳೆ

ಬೆಂಗಳೂರು, ಅಕ್ಟೋಬರ್ 11: ಬೆಂಗಳೂರು ಸೇರಿದಂತೆ ರಾಜ್ಯದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಭಾಗದ ಅರಬ್ಬಿ ಸಮುದ್ರದದಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಈ ಮೇಲ್ಮೈ ಸುಳಿಗಾಳಿ ಶನಿವಾರದ ವೇಳೆಗೆ ದುರ್ಬಲಗೊಳ್ಳಲಿದೆ. ನಂತರ ಅಂಡಮಾನ್‌ ಉತ್ತರ ಭಾಗದಲ್ಲಿ ಸಣ್ಣ ಪ್ರಮಾಣದ ಟ್ರಫ್ ಸೃಷ್ಟಿಯಾಗಲಿದ್ದು, ಅದು ಆಂಧ್ರ ಪ್ರದೇಶದ ಕರಾವಳಿ ಮಾರ್ಗವಾಗಿ ಸಾಗಲಿದೆ. ಈ ಕಾರಣಗಳಿಂದ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅ.12ರಂದು ಮತ್ತೆ ಚುರುಕಾಗಲಿರುವ ಮುಂಗಾರು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜ ನಗರ, ರಾಯಚೂರು, ಬೀದರ್‌, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧಾರಕಾರವಾಗಿ ಸುರಿಯುವ ಸಾಧ್ಯತೆಯಿದೆ.

ಶಾಹೀನ್ ಚಂಡಮಾರುತ ಪ್ರಭಾವದಿಂದ ಬೆಂಗಳೂರಿನಲ್ಲಿ ಭಾನುವಾರ ಕೂಡ ಬೆಳಗ್ಗೆಯಿಂದ ರಾತ್ರಿವರೆಗೂ ಬಿಡದೆ ಮಳೆ ಸುರಿಯಿತು.ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದು, ಕೆಲವೆಡೆ ತುಸು ಅಬ್ಬರ ಜೋರಾಗಿತ್ತು. ಮೆಜೆಸ್ಟಿಕ್‌, ಮಲ್ಲೇಶ್ವರ, ಹನುಮಂತನಗರ, ಬ್ಯಾಂಕ್‌ ಕಾಲೋನಿ, ಹೊಸಕೆರೆ ಹಳ್ಳಿ, ಮೈಸೂರು ರಸ್ತೆ, ರಾಜರಾಜೇಶ್ವರಿ ನಗರ, ವಿದ್ಯಾರಣ್ಯಪುರ, ರಿಚ್‌ಮಂಡ್‌ ವೃತ್ತ, ಶಾಂತಿ ನಗರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಇನ್ನೂ ಐದು ದಿನ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ವರುಣನ ಅಬ್ಬರ ಇರಲಿದೆ ಎಂದು ಹೇಳಲಾಗಿದೆ.

ಇನ್ನು ತುಮಕೂರು ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗೆ ಜೀವಕಳೆ ಬಂದಿದೆ. ತುಮಕೂರು, ಪಾವಗಡ , ಮಧುಗಿರಿ, ಕುಣಿಗಲ್‌, ಗುಬ್ಬಿಯಲ್ಲಿ ಉತ್ತಮ ಮಳೆಯಾಗಿದ್ದು, ಚಿ.ನಾ.ಹಳ್ಳಿ ಕೊರಟಗೆರೆ , ಶಿರಾ, ತಿಪಟೂರು, ತುರುವೇಕೆರೆಯಲ್ಲಿಸಾಧಾರಣ ಮಟ್ಟದಲ್ಲಿಮಳೆ ಇಳೆಗೆ ತಂಪೆರೆದಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಅಂಕೋಲ,ಮುನಿರಾಬಾದ್, ಅಥಣಿ, ಗೋಕರ್ಣ, ಇಳಕಲ್, ಬಾಲ್ಕಿ, ಸೈದಾಪುರ, ಶಿಡ್ಲಘಟ್ಟ, ಕಾರವಾರ, ಹುಮ್ನಾಬಾದ್, ತಾಳಿಕೋಟೆ, ಮಾಗಡಿ, ರಾಯಲ್‌ಪಾಡು, ಎಲೆಕ್ಟ್ರಾನಿಕ್ ಸಿಟಿ, ಕುಷ್ಟಗಿ, ರಾಣೆಬೆನ್ನೂರು, ಹಿರೆಕೆರೂರು, ಕಡೂರು, ಕೋಣನೂರು, ಕೋಟ, ಕೊಪ್ಪಳ, ಬಾದಾಮಿ, ಕೋಲಾರ, ಚಿಕ್ಕೋಡಿ, ಬಸವನ ಬಾಗೇವಾಡಿ, ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ನೆಲಮಂಗಲ, ಚನ್ನಗಿರಿ, ಹರಪ್ಪನಹಳ್ಳಿ, ಚಿಕ್ಕನಹಳ್ಳಿ, ಮಧುಗಿರಿ, ಬರ್ಗೂರಿನಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಎರಡು ದಿನ ಭಾರಿ ಮಳೆಯ ನಿರೀಕ್ಷೆ ಇದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಎಚ್‌ಎಎಲ್‌ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿರುವ ಪ್ರದೇಶ

ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿರುವ ಪ್ರದೇಶ

ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೀದರ್‌ನಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆಯಾಗಲಿದೆ?

ಎಲ್ಲೆಲ್ಲಿ ಮಳೆಯಾಗಲಿದೆ?

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 24 ಗಂಟೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+