ಅ.28ರವರೆಗೆ ರಾಜ್ಯದ 19 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು, ಅಕ್ಟೋಬರ್ 25: ರಾಜ್ಯದಲ್ಲಿ ಅಕ್ಟೋಬರ್ 28ರವರೆಗೆ 19ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ನೈರುತ್ಯ ಮುಂಗಾರು ಮರಳುವಿಕೆ ಹಾಗೂ ಈಶಾನ್ಯ ಹಿಂಗಾರು ಪ್ರಾರಂಭದ ಪ್ರಕ್ರಿಯೆಗಳಿಂದಾಗಿ ಕಳೆದ ಎಂಟತ್ತು ದಿನಗಳಿಂದ ಉತ್ತಮ ಮಳೆಯಾಗಿದೆ. ನಿನ್ನೆ ಹಾಗೂ ಕಳೆದ ರಾತ್ರಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಗದಗ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಮೈಸೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

ಮೇಲ್ಮೈ ಸುಳಿ ಗಾಳಿ ಉಂಟಾಗಿರುವ ಪರಿಣಾಮ ಮೋಡಗಳ ಚಲನೆ ಹೆಚ್ಚಾಗಿದೆ. ಅಲ್ಲದೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗಲಿದೆ.

ಕೆಲವೆಡೆ ಗುಡುವು ಮಿಂಚಿನ ಕೂಡಿದ ಸುರಿ ಮಳೆಯಾಗಲಿದೆ. ನೈರುತ್ಯ ಮುಂಗಾರು ಮರಳುವಿಕೆ ಈ ಬಾರಿ ಸಾಕಷ್ಟು ವಿಳಂಬವಾಯಿತು. ಆದರೂ ಈ ಅವಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಅಕ್ಟೋಬರ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೊಲಾರ, ಶಿರಾ, ತಿಪಟೂರು, ಕೂಡ್ಲಗಿ, ತೀನರಸಿಪುರ, ಮೈಸೂರು, ಎಳಂದೂರು, ತುಮಕೂರು ಮಧುಗಿರಿ, ಚಿತ್ರದುರ್ಗ, ನಾಗಮಂಗಲ, ಗುಬ್ಬಿ, ಬೆಂಗಳೂರು ಉತ್ತರ ಮತ್ತು ಪೂರ್ವ ತಾಲ್ಲೂಕಿನಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ.

ಇನ್ನೆರಡು ದಿನಗಳಲ್ಲಿ ಮುಂಗಾರು ಮರಳುವಿಕೆ ಪ್ರಕ್ರಿಯೆ ಪೂರ್ಣಗೊಂಡು ಈಶಾನ್ಯ ಹಿಂಗಾರು ಆರಂಭವಾಗಲಿದೆ. ಈಗಾಗಲೇ ಹಿಂಗಾರು ಮಳೆಯ ಆರಂಭಕ್ಕೆ ಬೇಕಾದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. ಹಿಂಗಾರು ಆರಂಭದಲ್ಲೇ ಹೆಚ್ಚು ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಶ್ರೀನಿವಾಸ್ ರೆಡ್ಡಿ ತಿಳಿಸಿದರು.

26ರಿಂದ ಹಿಂಗಾರು: ರಾಜ್ಯಕ್ಕೆ ಅಕ್ಟೋಬರ್‌ 26ರಿಂದ ಈಶಾನ್ಯ ಮಾರುತಗಳು ಪ್ರವೇಶವಾಗಲಿದ್ದು, ಹಿಂಗಾರು ಮಳೆ ಸುರಿಯಲಿದೆ. ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಗೆ ಕಾರಣವಾಗಲಿವೆ.

ಕರಾವಳಿಯಲ್ಲಿ ಸಾಧಾರಣ ಮಳೆ ಸುರಿಸುತ್ತವೆ. ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಅಷ್ಟೊಂದು ಪ್ರಭಾವ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

 ಎಲ್ಲೆಲ್ಲಿ ಮಳೆಯಾಗಲಿದೆ?

ಎಲ್ಲೆಲ್ಲಿ ಮಳೆಯಾಗಲಿದೆ?

ಕೋಟ, ಮಾಗಡಿ, ಚಿಕ್ಕನಹಳ್ಳಿ, ಹುನಗುಂದ, ಗೌರಿಬಿದನೂರು, ಕೃಷ್ಣರಾಜಸಾಗರ, ಕೊಳ್ಳೇಗಾಲ, ಹೆಸರಘಟ್ಟ, ಕುಣಿಗಲ್, ಕಿರವತ್ತಿ, ಯಲ್ಲಾಪುರ, ಬೇವೂರು, ಮಂಕಿ, ಪಾವಗಡ, ಕಾರವಾರ, ಮಂಚಿಕೆರೆ, ದಾವಣಗೆರೆ, ಬುಕ್ಕಪಟ್ಟಣ, ಬಾಳೆಹೊನ್ನೂರು, ಮಸ್ಕಿ, ಸವನೂರು, ಆನವಟ್ಟಿ, ಗೋಪಾಲನಗರ, ಹಾನಗಲ್, ಬ್ರಹ್ಮಾವರ, ಗಂಗಾವತಿ, ಲಕ್ಷ್ಮೇಶ್ವರ, ನೆಲಮಂಗಲ, ಹಿರಿಯೂರು, ಆಗುಂಬೆ, ಬೇಲೂರು, ಮದ್ದೂರು, ನಾಪೊಕ್ಲುವಿನಲ್ಲಿ ಮಳೆಯಾಗಿದೆ.

 ಬೆಂಗಳೂರಿನ ವಾತಾವರಣ ಹೇಗಿದೆ?

ಬೆಂಗಳೂರಿನ ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ಎಚ್‌ಎಎಲ್‌ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳು, ಕರಾವಳಿ ಭಾಗಗಳು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

 ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಕಲಬುರಗಿಯಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+