ಮೇ 12 ರಂದು ರಾಜ್ಯದ 6 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯ ಮುನ್ಸೂಚನೆ
ಬೆಂಗಳೂರು, ಮೇ 08: ರಾಜ್ಯದಲ್ಲಿ ಮೇ 12 ರಂದು ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಲ್ಲೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಚಿತ್ರದುರ್ಗದಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಬ್ಯವಾಗಿದೆ.
ಕಲಬುರಗಿಯಲ್ಲಿ ಅತಿ ಗರಿಷ್ಠ ಎಂದರೆ 39.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಿರುವ ಪ್ರದೇಶಗಳು
ಬೈಲಹೊಂಗಲ, ಧಾರವಾಡ, ಕಲಘಟಗಿ, ಹಗರಿಬೊಮ್ಮನಹಳ್ಳಿ, ಕೊಪ್ಪ, ಕಾರ್ಕಳ, ಶಿರಹಟ್ಟಿ, ಬಾಗೇವಾಡಿ, ಶೃಂಗೇರಿ, ತರೀಕೆರೆ, ನುಗ್ಗೆಹಳ್ಳಿ, ಸುಬ್ರಹ್ಮಣ್ಯ, ತೀರ್ಥಹಳ್ಳಿ, ಆಗುಂಬೆ, ರಾಮಗಿರಿ, ಹೊಸದುರ್ಗ, ಜಯಪುರದಲ್ಲಿ ಮಳೆಯಾಗಿದೆ.

ಮಳೆಯಾಗಬಹುದಾದ ಪ್ರದೇಶಗಳು
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳುರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Recommended Video

ಮುಂದಿ 48 ಗಂಟೆ ರಾಜ್ಯದ ವಾತಾವರಣ ಹೇಗಿರಲಿದೆ?
ಮುಂದಿನ 48 ಗಂಟೆ ರಾಜ್ಯಾದ್ಯಂತ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಗುಡುಗು ಸಮೇತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುಂದುವರೆಯಲಿದೆ.












Click it and Unblock the Notifications