ಸೆಪ್ಟೆಂಬರ್ 7 ರಿಂದ 9ರವರೆಗೆ ರಾಜ್ಯದ 7 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಬೆಂಗಳೂರು, ಸೆಪ್ಟೆಂಬರ್ 07: ರಾಜ್ಯದ 7 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7 ರಿಂದ 9ರವರೆಗೆ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಸುಮಾರು 1 ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ 2 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ವಿದರ್ಭ, ಛತ್ತೀಸ್ಗಢದಲ್ಲೂ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ.
ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 7 ರಿಂದ 9 ರವರೆಗೆ ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಕಲಬುರ್ಗಿ ಜಿಲ್ಲೆಯ ಸೊನ್ನ ಬ್ಯಾರೇಜ್ನಿಂದ ಭೀಮಾ ನದಿಗೆ 13,000 ಕ್ಯೂಸೆಕ್ಸ್ ನೀರು ಬಿಡಲಾಗಿದೆ.

ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಮಳೆ
ಇಂದು ದಕ್ಷಿಣ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ಹರಿಯಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್‌ಗಢದ ಕಡಿಮೆ ಒತ್ತಡದ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಮೂರು ದಿನ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಕೊಂಕಣ, ಗುಜರಾತ್, ರಾಜಸ್ಥಾನದಲ್ಲಿ ಸೆ. 10ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.8ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮಳೆಯಾಗಿರುವ ಪ್ರದೇಶಗಳು
ಕಂಪ್ಲಿ, ಮಂಕಿ, ಕದ್ರ, ಸಂತಹಳ್ಳಿ, ಗಂಗಾವತಿ, ಸೋಮವಾರಪೇಟೆ, ಕುಂದಾಪುರ, ಸುಬ್ರಹ್ಮಣ್ಯ, ಆಗುಂಬೆ, ಕೊಪ್ಪಳ, ಬಾದಾಮಿ, ದೇವರಹಿಪ್ಪರಗಿ, ಭಟ್ಕಳ, ಹುನಗುಂದ, ಕೋಟ, ಯಲಬುರ್ಗಾ, ಶಿರಾಲಿ, ಹಳಿಯಾಳ, ಯಲ್ಲಾಪುರ, ಜಾನ್ಮನೆ, ವಿಟ್ಲ, ಸಿದ್ದಾಪುರ, ಕೆಂಭಾವಿ, ನಾಪೊಕ್ಲು, ಪುನ್ನಂಪೇಟೆ, ಕುಶಾಲ್‌ನಗರ, ಬಂಟವಾಳ, ಸುಳ್ಯ, ಪುತ್ತೂರು, ಶ್ರೀಮಂಗಲ, ಹೊಸಪೇಟೆ, ಹಡಗಲಿ, ಕುಷ್ಟಗಿ, ಕಾರ್ಕಳ, ಬಾಗಲಕೋಟೆ, ಬೈಲಹೊಂಗಲ, ಗಂಗಾವತಿ, ಕೂಡ್ಲಿಗಿ, ತುಮ್ರಿ, ಬನವಾಸಿ, ವಿರಾಜಪೇಟೆ, ನೆಲಮಂಗಲ, ತ್ಯಾಗರ್ತಿ, ಲಿಂಗನಮಕ್ಕಿ, ಗದಗ, ಶೃಂಗೇರಿ, ಹೊಸಕೋಟೆ, ಸಕಲೇಶಪುರ, ಗೋಪಾಲನಗರ, ಕೊಳ್ಳೇಗಾಲ, ಮಂಡ್ಯದಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ
ಇಂದು ದಕ್ಷಿಣ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ಹರಿಯಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್‌ಗಢದ ಕಡಿಮೆ ಒತ್ತಡದ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Recommended Video

ಬೆಂಗಳೂರು ವಾತಾವರಣ ಹೇಗಿದೆ?
ಮೋಡಕವಿದ ವಾತಾವರಣವಿರಲಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.
ಎಚ್‌ಎಎಲ್‌ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications