ಮುಂದಿನ 2 ದಿನ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ನವೆಂಬರ್ 06: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಒಂದು ವಾರದಲ್ಲಿ ಭತ್ತ ಕಟಾವು ಮಾಡಲು ರೈತರು ಸಿದ್ಧತೆ ನಡೆಸಿದ್ದರು. ರೈತರು ಎಕರೆ ಭತ್ತಕ್ಕೆ ಸುಮಾರು 25 ರಿಂದ 30 ಸಾವಿರ ರೂಪಾಯಿ ಹಣ ಖರ್ಚು ಮಾಡಿದ್ದರು, ಇದೀಗ ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ಸರ್ಕಾರ ರೈತರ ಸಹಾಯಕ್ಕೆ ಮುಂದಾಗಬೇಕಿದೆ ಎಂದು ಅನ್ನದಾತರು ಆಗ್ರಹಿಸಿದ್ದಾರೆ.

ಇನ್ನು ಕೇರಳದ ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡಿನ ಚೆನ್ನೈ, ತಿರುವೆಲ್ಲೂರು, ಚೆಂಗಲ್‌ಪಟ್ಟು, ಕಾಂಚಿಪುರಂ, ಪುದುಕೊಟ್ಟಾಯ್, ಅರಿಯಾಲೂರ್, ಪೆರಂಬಲೂರು, ತಿರುಚಿ, ಕುಡ್ಡಲೋರ್, ವಿಳುಪುರಂ, ಕಲ್ಲಕುರಿಚಿ, ತಾಂಜಾವೂರು, ತಿರುವರೂರು, ವೆಲ್ಲೂರು, ತಿರುಪತ್ತೂರ್, ನಮಕ್ಕಲ್, ಕರೂರು, ನಾಗಪತ್ತಿನಂ, ಮಯಿಲಾದುತುರೈ ಹಾಗೂ ರಾಣಿಪೇಟೆಯಲ್ಲಿ ಶಾಲೆಗಳಿಗೆ ರಜೆ ಘೋಸಷಿಲಾಗಿದೆ.

ತಿರುವಲ್ಲೂರು, ಚೆನ್ನೈ, ರಾಮನಾಥಪುರಂ, ತಿರುನೇಲ್‌ವೇಲಿ, ಥೂತುಕುಡಿ, ತಾಂಜಾವೂರ್, ತಿರುವಾರೂರ್, ತಿರುಪತ್ತೂರು, ನಾಗಪಟ್ಟಣಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 6ರವರೆಗೆ ತಮಿಳುನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.ದೀಪಾವಳಿ ಹಬ್ಬ ಮುಗಿಯುವವರೆಗೂ ಇದೇ ಪರಿಸ್ಥಿತಿ ಮುಂದುವರೆಯಲಿದ್ದು, ಬಲವಾದ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ಚಳಿಯ ಪ್ರಮಾಣವೂ ಹೆಚ್ಚಾಗಿದೆ.

ಎಲ್ಲೆಲ್ಲಿ ಮಳೆ

ಎಲ್ಲೆಲ್ಲಿ ಮಳೆ

ಮೈಸೂರು, ಚಾಮರಾಜನಗರ, ಶ್ರೀರಂಗಪಟ್ಟಣ, ಮದ್ದೂರು, ಜಯಪುರ, ಬೆಂಗಳೂರು, ಕಾರ್ಕಳ, ಆಗುಂಬೆ, ಬಾಳೆಹೊನ್ನೂರು, ಮಾಗಡಿ, ಸೊರಬ, ಶೃಂಗೇರಿ, ಬೆಂಗಳೂರು ಎಚ್‌ಎಎಲ್‌, ಭಟ್ಕಳ, ಶ್ರವಣಬೆಳಗೊಳ, ಮಾಲೂರು, ಮಧುಗಿರಿ, ಹೊನ್ನಾವರ, ಲಿಂಗನಮಕ್ಕಿ, ಮುಲ್ಕಿ, ಬೆಳ್ತಂಗಡಿ, ಹುಂಚದಕಟ್ಟೆ, ಬ್ರಹ್ಮಾವರ, ಶಿರಾಲಿ, ಗೋಕರ್ಣ, ಕೆಆರ್ ಪೇಟೆ, ಪಾಂಡವಪುರ, ಉಡುಪಿ, ಕೋಟ, ಬನವಾಸಿ, ಕುಮಟಾ, ಮಂಡ್ಯ, ಜಿಕೆವಿಕೆ, ಹೊಸಕೋಟೆ, ನೆಲಮಂಗಲ, ದಾವಣಗೆರೆ, ಕುಣಿಗಲ್‌ನಲ್ಲಿ ಮಳೆಯಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಮಧ್ಯಾಹ್ನದ ಬಳಿಕ ಮೋಡ ಆವರಿಸಿ ಮಳೆಯಾಗುವ ಸಾಧ್ಯತೆ ಇದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಕೆಐಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Recommended Video

    Scotland ನಾಯಕನ ಕನಸನ್ನ ನನಸು ಮಾಡಿದ ವಿರಾಟ್ | Oneindia Kannada
    ವಾಯುಭಾರ ಕುಸಿತ

    ವಾಯುಭಾರ ಕುಸಿತ

    ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

    ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತ ಕಾಣಿಸಿಕೊಂಡಿರುವ ಹಿನ್ನೆಲೆ ಮುಂದಿನ ಮೂರು ದಿನ ಮಳೆಯ ಆರ್ಭಟ ಇರಲಿದೆ. ಜೊತೆಗೆ ಬೆಂಗಳೂರಿನಲ್ಲಿಯೂ ವ್ಯಾಪಾಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಇಡೀ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ಅಲ್ಲದೇ ನಗರದ ಹಲವಾರು ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿ ಹೋಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+