ರಾಜ್ಯದಲ್ಲಿ ಸೆ. 15ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 11: ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೂ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಇದೇ 15ರವರೆಗೂ ಮಳೆಯ ಅಬ್ಬರ ಮುಂದುವರೆಯಲಿದೆ.
ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಳದೆ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೆ 15ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಳದೆ ಎರಡು ದಿನಗಳಿಂದಲೂ ಮಳೆಯಾಗುತ್ತಿದೆ ಎಂದೂ ಇಲಾಖೆ ವರದಿ ಹೇಳಿದೆ.
ಪ್ರಮುಖವಾಗಿ ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇತ್ತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಯಾವ್ಯಾವ ರಾಜ್ಯಗಳಲ್ಲಿ ಮಳೆ?
ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್ಗಢ್ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.
ಕರಾವಳಿ ಕರ್ನಾಟಕದ ಭಾಗಗಳು ಮತ್ತು ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ, ಕೊಂಕಣ ಮತ್ತು ಗೋವಾಮತ್ತು ಪ್ರತ್ಯೇಕ ಭಾಗಗಳಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಇಲಾಖೆ ತಿಳಿಸಿದೆ.

ಮಳೆಯಾಗಿರುವ ಪ್ರದೇಶಗಳು
ನೈಋತ್ಯ ಮುಂಗಾರು ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯವಾಗಿತ್ತು, ಒಳನಾಡಿನಲ್ಲಿ ದುರ್ಬಲವಾಗಿತ್ತು, ಸುಬ್ರಹ್ಮಣ್ಯ, ಕದ್ರಾ, ಆಗುಂಬೆ, ಮುಲ್ಕಿ, ಬೆಳ್ತಂಗಡಿ, ಪುತ್ತೂರು, ಮಂಚಿಕೆರೆ, ಮಾಣಿ, ವಿಟ್ಲ, ಕೋಟ, ಕಾರ್ಕಳ, ಕೊಲ್ಲೂರು, ಶಿರಾಲಿ, ಅಂಕೋಲ, ಯಲ್ಲಾಪುರ, ಹಳಿಯಾಳ, ಬೆಳಗಾವಿ, ಲೋಂಡ, ಸೋಮವಾರಪೇಟೆ, ತೀರ್ಥಹಳ್ಳಿಯಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ವಾತಾವರಣ ಹೇಗಿದೆ?
ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಯಾವ್ಯಾವ ಪ್ರದೇಶಗಳಲ್ಲಿ ಮಳೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications