ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 3ರವರೆಗೂ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 29: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮತ್ತೆ ಮಳೆಯಆರ್ಭಟ ಜೋರಾಗಿದ್ದು, ಇನ್ನು ಕೆಲ ದಿನಗಳ ತನಕ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿನ ಚಂಡ ಮಾರುತ ಹಾಗೂ ಮುಂಗಾರು ಚುರುಕುಗೊಂಡ ಪ್ರಭಾವ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮಾನ್ಸೂನ್ ಜೈಸಲ್ಮೇರ್, ಕೋಟ, ರಾಯ್ಪುರ್, ಪುರಿ ಮತ್ತು ನಂತರ ಪೂರ್ವ-ಆಗ್ನೇಯ ದಿಕ್ಕಿನಲ್ಲಿ ಗುಲಾಬ್ ಚಂಡಮಾರುತದ ಕೇಂದ್ರದ ಕಡೆಗೆ ಹಾದು ಹೋಗುತ್ತಿದೆ. ಮಧ್ಯ ಮಧ್ಯಪ್ರದೇಶದ ಉತ್ತರ ಭಾಗಗಳಲ್ಲಿ ಚಂಡಮಾರುತದ ಪರಿಚಲನೆ ಮುಂದುವರಿದಿದೆ ಎಂದು ತಿಳಿಸಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕಳೆದ 2 ದಿನಗಳಿಂದ ಭಾರೀ ಮಳೆಯಾಗುತಿತ್ತು, ಆದರೆ ನಿನ್ನೆ ಕೊಂಚ ಬಿಡುವು ಪಡೆದ ಹಾಗಿತ್ತು. ನಗರದ ಕೆಲ ಭಾಗಗಳಲ್ಲಿ ಮಳೆಯಾಗಿದ್ದು, ಇನ್ನು ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿತ್ತು.

ನೈಋತ್ಯ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಭಾರೀ ಮಳೆಗೆ ಕಾರಣವಾಗುತ್ತದೆ. ಆದರೆ ಈ ಬಾರಿ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು ಎಂದು ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಲ್ಲಿಯೂ ಮಳೆ ಸುರಿದ ಕಾರಣ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿತ್ತು. ಈಗ ಮುಂಗಾರು ಚುರುಕುಗೊಂಡಿದ್ದು, ಮಳೆಯ ಎಚ್ಚರಿಕೆ ಕೊಡಲಾಗಿದೆ.

ಗುಲಾಬ್ ಚಂಡಮಾರುತದ ಅಬ್ಬರ ಆಂಧ್ರಪ್ರದೇಶ, ಒರಿಸ್ಸಾ, ತೆಲಂಗಾಣ, ಗುಜರಾತ್​ನಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕ ಸೇರಿ ದೇಶಾದ್ಯಂತ ಮಳೆ ಕಡಿಮೆಯಾಗಲಿದೆ ಎನ್ನಲಾಗಿತ್ತು.

ಆದರೆ, ಈ ಚಂಡಮಾರುತ ಅರಬ್ಬಿ ಸಮುದ್ರದತ್ತ ತೆರಳಿದ್ದು, ಅಲ್ಲಿ ಶಾಹೀನ್ ಚಂಡಮಾರುತದ ರೂಪ ತಳೆದು ಮತ್ತೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಸೆ. 30ರ ವೇಳೆಗೆ ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದಿದೆ.

ಇನ್ನು ಎರಡು ದಿನಗಳಲ್ಲಿ ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯುವ ಸಾಧ್ಯತೆಯಿದೆ. ಈ ಶಾಹೀನ್ ಚಂಡಮಾರುತದ ಹೆಸರನ್ನು ಕತಾರ್ ನೀಡಿದೆ. ಗುಲಾಬ್ ಚಂಡಮಾರುತದ ಅಬ್ಬರ ತೆಲಂಗಾಣ, ಮರಾಠವಾಡ, ವಿದರ್ಭದಲ್ಲಿ ಕಡಿಮೆಯಾಗುತ್ತಿದೆ. ನಾಳೆಯಿಂದ ಈ ಸೈಕ್ಲೋನ್ ಅಬ್ಬರ ಸಂಪೂರ್ಣ ಕಡಿಮೆಯಾಗಲಿದ್ದು, ಸೆ. 30ರ ವೇಳೆಗೆ ಇದೇ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ರೂಪ ತಳೆಯಲಿದೆ.

ಶಾಹೀನ್ ಚಂಡಮಾರುತದ ಪರಿಣಾಮದಿಂದ ಗುಜರಾತ್, ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಭಾಗದಲ್ಲಿ ವಿಪರೀತ ಮಳೆಯಾಗಲಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಕಮಲಾಪುರ, ಕೊಲ್ಲೂರು,ಕೋಟ, ಉಡುಪಿ, ಕಾರ್ಕಳ, ಮಾಣಿ, ಸುಬ್ರಹ್ಮಣ್ಯ, ಆಳಂಡ, ಮಡಗಾಂವ್, ಸೇಡಂ, ಬಾಲ್ಕಿ, ಚಿಂಚೋಳಿ, ಬೀದರ್, ಭಾಗಮಂಡಲ, ಕುಂದಾಪುರ, ಬ್ರಹ್ಮಾವರ, ಕಲಬುರಗಿ, ಅಡಕಿ, ಕೊಟ್ಟಿಗೆಹಾರ, ಕಾರವಾರ, ಶಿರಾಲಿ, ಅಂಕೋಲಾ, ಬೇಲಿಕೇರಿ, ಮಂಕಿ, ಸಿದ್ದಾಪುರ, ಗಾಣಗಾಪುರ, ಶೃಂಗೇರಿ, ಸಕಲೇಶಪುರ, ದೇವರಹಿಪ್ಪರಗಿ, ತಾಳಿಕೋಟೆ, ನಾಪೋಕ್ಲು, ಸೋಮವಾರಪೇಟೆ, ಪುತ್ತೂರು, ಮಂಗಳೂರು, ವಿಟ್ಲ, ಮುಲ್ಕಿ, ಸುಳ್ಯ, ಕ್ಯಾಸಲ್ ರಾಕ್, ಗೋಕರ್ಣ, ಬಸವನ ಬಾಗೇವಾಡಿ, ವಿರಾಜಪೇಟೆ, ಜೇವರ್ಗಿ, ಹಾಸನ, ಸುಂಟಿಕೊಪ್ಪದಲ್ಲಿ ಮಳೆಯಾಗಿದೆ.

 ಬೆಂಗಳೂರು ಹವಾಮಾನದ ಬಗ್ಗೆ ಮಾಹಿತಿ

ಬೆಂಗಳೂರು ಹವಾಮಾನದ ಬಗ್ಗೆ ಮಾಹಿತಿ

ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.7 ಡಿಗ್ರಿ ಸೆಲ್ಸಿಯಸ್, 18.9 ಡಿಗ್ರಿ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Recommended Video

IPLನಲ್ಲಿ ಉತ್ತಮ ಆಟವಾಡಿ T20 ವಲ್ಡ್ ಕಪ್ ಗೆ ಸ್ಥಾನ ಗಿಟ್ಟಿಸಿಕೊಂಡ ಮೂರು ಆಟಗಾರರು | Oneindia Kannada

English summary
The Meteorological department predicted that, Heavy Rainfall Will Occur In Coastal And North Interior Karnataka Till October 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X