ನವೆಂಬರ್ 1ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು, ಅಕ್ಟೋಬರ್ 28: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 1ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಅ.30ಕ್ಕೆ ಈ ಜಿಲ್ಲೆಗಳ ಜೊತೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೂ 'ಯೆಲ್ಲೋ ಅಲರ್ಟ್‌' ಘೋಷಿಸಲಾಗಿದೆ. ಅ.28ಮತ್ತು ಅ.29ರಂದು ಮಳೆಯ ಅಬ್ಬರ ಇರುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ಬೀದರ್‌ನಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್‌ ಮತ್ತು ಶಿರಾಲಿಯಲ್ಲಿ ಗರಿಷ್ಠ 33.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಉಷ್ಣತೆ ವರದಿಯಾಗುತ್ತಿದ್ದು ಚಳಿಯ ವಾತಾವರಣ ಇದೆ.

ಬೆಳಗಾವಿಯ ಲೋಂಡಾ, ಶಿವಮೊಗ್ಗದ ಆಗುಂಬೆಯಲ್ಲಿ ತಲಾ 5 ಸೆಂ.ಮಿ. ಉತ್ತರ ಕನ್ನಡದ ಜಗಲ್‌ಬೆಟ್‌, ಮೈಸೂರಿನ ಕೆಆರ್‌ ನಗರ ತಲಾ 4, ದಕ್ಷಿಣ ಕನ್ನಡದ ಪುತ್ತೂರು, ಮೈಸೂರಿನ ಬಿಳಿಕೆರೆ, ಕೊಡಗಿನ ನಾಪೊಕ್ಲು, ಚಿಕ್ಕಮಗಳೂರಿನ ಕಳಸದಲ್ಲಿ ತಲಾ 3 ಸೆಂಮೀ ಮಳೆಯಾಗಿದೆ.

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಅಕ್ಟೋಬರ್‌ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.

ಅ.29ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ 'ಯೆಲ್ಲೋ ಅಲರ್ಟ್‌' ಎಚ್ಚರಿಕೆ ನೀಡಲಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಸರಗೂರು, ವಿರಾಜಪೇಟೆ, ಮೈಸೂರು, ಬ್ರಹ್ಮಾವರ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

 ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

 ಗರಿಷ್ಠ ಉಷ್ಣಾಂಶ

ಗರಿಷ್ಠ ಉಷ್ಣಾಂಶ

ಕಾರವಾರದಲ್ಲಿ ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್‌ನಲ್ಲಿ ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+