ನವೆಂಬರ್ 5 ರಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ನವೆಂಬರ್ 01: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ನವೆಂಬರ್ 5ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿ, ಆಂಧ್ರಪ್ರದೇಶದಲ್ಲಿ ಇಂದಿನಿಂದ ನವೆಂಬರ್ 1ರವರೆಗೂ ಭಾರೀ ಮಳೆಯಾಗಲಿದೆ.
ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
ತ್ರಿಶೂರ್, ಪಾಲಕ್ಕಾಡ್, ಕೋಳಿಕ್ಕೋಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಿಗೆ 'ಹಳದಿ' ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಶ್ರೀಲಂಕಾ ಕರಾವಳಿಯ ದಕ್ಷಿಣ-ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶ ಮತ್ತು ಅದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದಾಗಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇಂದು ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 1 ರಂದು ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆ ಸುರಿಯಬಹುದು. ನವೆಂಬರ್ 1ರಿಂದ 3ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮೆ, ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ.
ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಗೋವಾ, ದಕ್ಷಿಣ ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಮುಂದಿನ 3 ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ
ಒಡಿಶಾ, ಛತ್ತೀಸ್‌ಗಢ, ಸಿಕ್ಕಿಂ, ಉಪ-ಹಿಮಾಲಯದ ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಕೇರಳದ ವಿವಿಧ ಜಿಲ್ಲೆಗಳಿಗೆ ಕಿತ್ತಳೆ ಮತ್ತು ಹಳದಿ ಎಚ್ಚರಿಕೆಯನ್ನು ನೀಡಿದೆ.

ಮಳೆಯಾದ ಪ್ರದೇಶಗಳು
ಹಾಸನ, ಕಾರ್ಕಳ, ಬೆಳ್ಳೂರು, ಆಲೂರು, ಬೆಳ್ತಂಗಡಿ, ಸುಬ್ರಹ್ಮಣ್ಯ, ನುಗ್ಗೇಹಳ್ಳಿ, ಸಿಆರ್ ಪಾಟ್ನಾ, ಅರಕಲಗೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಘಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಾತಾವರಣ ಹೇಗಿರಲಿದೆ?
ಮುಂದಿನ 24 ಗಂಟೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಗರಿಷ್ಠ ಉಷ್ಣಾಂಶ
ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.