ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.16ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರವರೆಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲೂ ಕೂಡ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನೂ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಅಂತೆಯೇ, ಮಳೆಯಿಂದಾಗಿ ಟ್ರಾಫಿಕ್ ಸಮಸ್ಯೆಯೂ ಸೃಷ್ಟಿಯಾಗಿತ್ತು.

 ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರಿ ಮಳೆ ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರಿ ಮಳೆ

ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೊಬಾರ್, ಆಂಧ್ರಪ್ರದೇಶ, ತೆಲಂಗಾಣ, ಲಕ್ಷದ್ವೀಪ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಒಡಿಶಾ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ತೆಲಂಗಾಣ, ಗೋವಾ, ಮಧ್ಯಪ್ರದೇಶದ ಹಲವೆಡೆ ಹಾಗೂ ದಕ್ಷಿಣ ಗುಜರಾತ್​ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅಂತೆಯೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ ಹಾಗೂ ಕೇರಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ರಾಯಲಸೀಮದಲ್ಲಿ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಆಂಧ್ರಪ್ರದೇಶ, ಗಂಗಾ ಪಶ್ಚಿಮ ಬಂಗಾಳ, ಸಿಕ್ಕಿಂ, ತೆಲಂಗಾಣದ ಕೆಲವು ಭಾಗಗಳು ಮತ್ತು ಉತ್ತರ ಕರ್ನಾಟಕದ ಒಳಭಾಗದಲ್ಲಿ ಭಾರೀ ಮಳೆಯಾಗಿದೆ. ಗುಜರಾತ್, ಕೊಂಕಣ ಮತ್ತು ಗೋವಾ, ಆಗ್ನೇಯ ಎಂಪಿ, ಉಪ ಹಿಮಾಲಯದ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಲಕ್ಷದ್ವೀಪದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರಕ್ಕೆ ಹೊಸದುರ್ಗ ತಾಲೂಕಿನ ಮಾಚೇನಹಳ್ಳಿ ಗ್ರಾಮ ಸರ್ಕಾರಿ ಶಾಲೆ ಜಲಾವೃತವಾಗಿತ್ತು. ಶಾಲೆಯೊಳಗಿನ ಪುಸ್ತಕ, ದಾಖಲೆಗಳು, ಪೀಠೋಪಕರಣ, ಆಟದ ಸಾಮಾಗ್ರಿಗಳು ನೀರುಪಾಲಾದ್ವು. ಗ್ರಾಮಸ್ಥರು, ಮಕ್ಕಳು ಶಾಲೆಗೆ ಧಾವಿಸಿ ಶಾಲಾ ಸಾಮಗ್ರಿಗಳನ್ನು ರಕ್ಷಿಸಿದ್ರು. ಇನ್ನು ಹಾಲುರಾಮೇಶ್ವರದಲ್ಲಿ ಗುಡುಗು-ಸಿಡಿಲು ಸಹಿತ 1 ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾಯ್ತು. ಇತ್ತ ಬಾಗಲಕೋಟೆ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಇಬ್ಬರು ಸಹೋದರರು ಬಲಿಯಾಗಿದ್ದಾರೆ. ತಗಡಿನ ಶೆಡ್ ಕುಸಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

 ಮಳೆಯಾಗಿರುವ ಪ್ರದೇಶಗಳಿವು

ಮಳೆಯಾಗಿರುವ ಪ್ರದೇಶಗಳಿವು

ಸುಬ್ರಹ್ಮಣ್ಯ, ಹಳಿಯಾಳ, ಹೊಸದುರ್ಗ, ಮಡಿಕೇರಿ, ಮಂಗಳೂರು, ಅಣ್ಣಿಗೆರೆ, ಹೊನಕೆರೆ, ವಿಟ್ಲ, ರಾಯಚೂರು, ಮುನಿರಾಬಾದ್, ಭಾಗಮಂಡಲ, ಮಂಡ್ಯ, ಬೆಳ್ಳೂರು, ಮಳವಳ್ಳಿ, ನಾಗನಹಳ್ಳಿ, ಮಾಣಿ, ಚಿಂಚೋಳಿ, ಶಿರಹಟ್ಟಿ, ಧಾರವಾರಡ, ಕೊಪ್ಪಳ, ಕುಷ್ಟಗಿ, ಬಸವಕಲ್ಯಾಣ, ಬುಕ್ಕಪಟ್ಟಣ, ಸಂಡೂರು, ರಾಮನಗರ, ಮಾಗಡಿ, ಆಗುಂಬೆ, ಎಲೆಕ್ಟ್ರಾನಿಕ್‌ ಸಿಟಿ, ಕಲಬುರಗಿ, ಬೆಳಗಾವಿ, ಅಥಣಿ, ಗಂಗಾವತಿ, ಕಮಲಾಪುರ, ಕನಕಪುರ, ಬೆಂಗಳೂರು, ತ್ಯಾಗರ್ತಿ, ಸೈದಾಪುರದಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದೆ, ಸೋಮವಾರ ಮಧ್ಯಾಹ್ನದಿಂದ ಹಲವೆಡೆ ಮಳೆಯಾಗಿತ್ತು. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 ಎಲ್ಲೆಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಎಲ್ಲೆಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಶಿರಾಲಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

Dan Christian ಅವರ ಪತ್ನಿಗೆ ಹಿಂಸೆ ಕೊಡುತ್ತಿರುವ RCB ಅಭಿಮಾನಿಗಳು | Oneindia Kannada

English summary
Meteorological Department Predicted that, Heavy Rainfall Will Occur In Coastal Districts And South Interior Karnataka Till October 16.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X