ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಧಾರಾಕಾರ ಮಳೆಯ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 04: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಶಿವಮೊಗ್ಗದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಸೆಪ್ಟೆಂಬರ್‌ 5 ಮತ್ತು 6ಕ್ಕೆ ಕರಾವಳಿ ಮತ್ತು ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ರಾಜ್ಯ ಕರಾವಳಿಯಲ್ಲಿ ಸೆಪ್ಟೆಂಬರ್‌ 4ಕ್ಕೆ ಮಿಂಚು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಸುಳಿ ಗಾಳಿ ಸೃಷ್ಟಿಯಾಗಿ ದಕ್ಷಿಣ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯತ್ತ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ವರುಣನ ಆರ್ಭಟ ಇನ್ನೂ ಕೆಲ ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಎಲ್ಲಿ ಎಷ್ಟು ಮಳೆ

ಎಲ್ಲಿ ಎಷ್ಟು ಮಳೆ

ಉತ್ತರ ಕನ್ನಡದ ಮಂಕಿಯಲ್ಲಿ 6 ಸೆಂಮೀ, ಭಟ್ಕಳ, ಗೋಕರ್ಣ, ದಕ್ಷಿಣ ಕನ್ನಡದ ವಿಟ್ಲ, ಶಿವಮೊಗ್ಗದ ಆಗುಂಬೆಯಲ್ಲಿ ತಲಾ 4 ಸೆಂಮೀ, ಉಡುಪಿಯ ಕುಂದಾಪುರ, ಕೋಟದಲ್ಲಿ ತಲಾ 3 ಸೆಂಮೀ ಮಳೆ ಬಿದ್ದಿದೆ.

ಗುರುವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಯಲ್ಲಿ ನೈರುತ್ಯ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿತ್ತು. ಆದರೆ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು.
 ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಕೆಐಎಎಲ್‌ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಉತ್ತಮ ಮಳೆಯಾಗಿತ್ತು

ಉತ್ತಮ ಮಳೆಯಾಗಿತ್ತು

ಆಗಸ್ಟ್‌ ತಿಂಗಳಲ್ಲಿ ಆರಂಭದಿಂದ ಮಂಕಾಗಿದ್ದ ಮುಂಗಾರು ಮಳೆ ಕೊನೆಯ ವಾರ ಚೇತರಿಸಿಕೊಂಡಿದೆ. ಆ.26 ರಿಂದ ಸೆ.1ರ ಅವಧಿಯಲ್ಲಿ ಉಡುಪಿ, ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ದಾವಣಗೆರೆ, ಕೋಲಾರ, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ರಾಯಚೂರು, ಬಳ್ಳಾರಿ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಉತ್ತರ ಕನ್ನಡ, ಕೊಪ್ಪಳ, ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ವಾಡಿಕೆಯ ಮಳೆ ಬಿದ್ದಿದೆ. ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಧಾರವಾಡ ಮತ್ತು ಬೆಳಗಾವಿಯಲ್ಲಿ ನಿರೀಕ್ಷಿತ ಮಳೆ ಸುರಿದಿಲ್ಲ.

 ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ

ಸೆ.5 ಮತ್ತು 6ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇಂದೂ ಸಹ ಕರಾವಳಿಯಲ್ಲಿ ಮಿಂಚು, ಗುಡುಗು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+