ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 13: ಕಳೆದ ಒಂದು ವಾರದಿಂದ ಕೊಂಚ ತಗ್ಗಿದ್ದ ಮಳೆ ಆಗಸ್ಟ್ 12ರಿಂದ ಸ್ವಲ್ಪ ಚುರುಕಾಗಿದೆ. ಆಗಸ್ಟ್ 16ರವರೆಗೆ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆ.15 ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಉತ್ತರ ಒಳನಾಡಿನ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬುಧವಾರ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 3 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 2 ಸೆಂ.ಮೀ. ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಕೊಂಚ ಬಿಡುವು ಪಡೆದಿದ್ದ ಮಳೆ ಮತ್ತೆ ಚುರುಕಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಯಾದಗಿರಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲೂ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

 ವಿಜಯಪುರದಲ್ಲಿ ಭಾರಿ ಮಳೆ

ವಿಜಯಪುರದಲ್ಲಿ ಭಾರಿ ಮಳೆ

ಎರಡು ವಾರಗಳಿಂದ ಮರೆಯಾಗಿದ್ದ ಮಳೆ ಗುರುವಾರ ಸಂಜೆ ಸುಮಾರು ಅರ್ಧ ಗಂಟೆಗಳ ಕಾಲ ವಿಜಯಪುರ ಸೇರಿದಂತೆ ತಾಳಿಕೋಟೆ ಪಟ್ಟಣದಲ್ಲಿ ಸುರಿದಿದೆ. ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ಬಾಡತೊಡಗಿತ್ತು, ಇದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬಿಸಿಲಿನ ತಾಪ ಬೇಸಿಗೆಯನ್ನು ನೆನಪಿಸುವಂತಿತ್ತು. ಇದೀಗ ಮಳೆಯಾಗಿರುವುದರಿಂದ ರೈತರ ಆತಂಕ ಕೊಂಚ ದೂರವಾಗಿದೆ. ವಾತಾವರಣವೂ ತಂಪಾಗಿದೆ. ಸುಮಾರು ಅರ್ಧಗಂಟೆ ಮಳೆಯಾದ ಪರಿಣಾಮ ಚರಂಡಿಗಳು ಉಕ್ಕಿ ಮಳೆ ನೀರು ರಸ್ತೆಯ ಮೇಲೆ ಹರಿಯಿತು. ತಗ್ಗು ಪ್ರದೇಶ, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯವೂ ಕಂಡುಬಂದಿತ್ತು.

 ಬೆಂಗಳೂರಿನಲ್ಲಿ ತಂಪಾದ ವಾತಾವರಣ

ಬೆಂಗಳೂರಿನಲ್ಲಿ ತಂಪಾದ ವಾತಾವರಣ

ಕಳೆದ ಐದಾರು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ದರ್ಶನವಾಗಿರಲಿಲ್ಲ. ಕಳೆದ 2-3 ದಿನಗಳಿಂದ ಬೆಂಗಳೂರಿನಲ್ಲಿ ಬಿಸಿಲು ಕಾಣಿಸಿಕೊಂಡಿತ್ತು. ಆದರೆ, ಇಂದು ಮಧ್ಯಾಹ್ನದಿಂದ ಇದ್ದಕ್ಕಿದ್ದಂತೆ ಮಳೆ ಸುರಿಯಲಾರಂಭಿಸಿದೆ. ಬನಶಂಕರಿ, ಬಸವನಗುಡಿ, ಹನುಮಂತನಗರ, ಗಿರಿನಗರ, ಜಯನಗರ, ಚಾಮರಾಜಪೇಟೆ, ಶಾಂತಿನಗರ ಭಾಗದಲ್ಲಿ ಇಂದು ಮಳೆ ಸುರಿದಿದೆ. ನಾಳೆ ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.

ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮತ್ತೆ ಮಳೆಯಾಗಿದೆ. ಶುಕ್ರವಾರ ಇಡೀ ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ 4 ಗಂಟೆಯ ಬಳಿಕ ತುಂತುರು ಮಳೆಯಾಗುವ ಸಾಧ್ಯತೆಯದೆ.

Recommended Video

    ಹವಾಮಾನ ಇಲಾಖೆಯಿಂದ ಭಾರಿ ಮಳೆ ಸೂಚನೆ! | Oneindia Kannada
     ಬಂಗಾಳಕೊಲ್ಲಿಯಲ್ಲಿ ಮಾರುತ

    ಬಂಗಾಳಕೊಲ್ಲಿಯಲ್ಲಿ ಮಾರುತ

    ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕಲ್ಯಾಣ ಕರ್ನಾಟಕದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಆ. 13ರವರೆಗೂ ಮಳೆ ಮುಂದುವರೆಯಲಿದೆ.

    ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

     ಮಳೆಯಾಗಿರುವ ಪ್ರದೇಶಗಳು

    ಮಳೆಯಾಗಿರುವ ಪ್ರದೇಶಗಳು

    ಆಗುಂಬೆಯಲ್ಲಿ 7 ಸೆಂ.ಮೀ ಮಳೆಯಾಗಿದೆ. ಉಡುಪಿ, ಕಾರ್ಕಳ, ಗೋಕರ್ಣ, ಹಾವೇರಿ, ಸಿದ್ದಾಪುರ, ಮಂಗಳೂರು, ಶೃಂಗೇರಿ, ಚಾಮರಾಜನಗರ, ಕಾರವಾರ, ಹೊನ್ನಾವರ, ಮಂಕಿ, ಯಲ್ಲಾಪುರ, ಧರ್ಮಸ್ಥಳ, ಹಾನ್‌ಗಲ್, ಹುಂಚದಕಟ್ಟೆ, ಭದ್ರಾವತಿ, ತುಮ್ರಿ, ಜಯಪುರ, ತ್ಯಾಗರ್ತಿ, ಲಿಂಗನಮಕ್ಕಿ, ತಾಳಗುಪ್ಪ, ಅಜ್ಜಂಪುರ, ಪುತ್ತೂರು, ಮುಲ್ಕಿಯಲ್ಲಿ ಮಳೆಯಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+