ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಲಿದೆ ಮಳೆ

ಬೆಂಗಳೂರು, ಜೂನ್ 30: ಕರ್ನಾಟಕದಾದ್ಯಂತ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಆರಂಭವಾಗಿದೆ.

ಆದರೆ ಮುಂದಿನ ಕೆಲವು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 30ರಿಂದ ಜುಲೈ 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಇನ್ನು 2 ದಿನಗಳ ಕಾಲ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗಲಿದೆ.

 ಕೊಂಚ ಬಿಡುವು ಪಡೆ ಮಳೆ

ಕೊಂಚ ಬಿಡುವು ಪಡೆ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಕಳೆದ 3 ದಿನಗಳಿಂದ ಮಳೆ ಕೊಂಚ ಬಿಡುವು ಪಡೆದಿದೆ. ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೂಡ ಜುಲೈ 1ರವರೆಗೆ ಭಾರೀ ಮಳೆಯಾಗಲಿದೆ.

 ಜುಲೈ 1 ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ

ಜುಲೈ 1 ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ

ಜುಲೈ 1ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. 2 ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಮನೆಯೊಳಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಏರ್ಪಟ್ಟಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇಂದು ಮತ್ತು ನಾಳೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಇದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ. ರಾಯಚೂರಿನ ಮಸ್ಕಿಯ 4 ವಾರ್ಡ್ ಸಂಪೂರ್ಣ ಜಲಾವೃತವಾಗಿವೆ.

 ಒಡಿಶಾದಲ್ಲಿ ಭಾರಿ ಮಳೆ

ಒಡಿಶಾದಲ್ಲಿ ಭಾರಿ ಮಳೆ

ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಸಾಧಾರಣ ಮಳೆಯಾಗಲಿದೆ.

Recommended Video

    ಈ ಮೂರು ಮಹಾಪಾಪಗಳಿಂದಲೇ ದ್ರೌಪದಿಗೆ ಸ್ವರ್ಗ ಪ್ರಾಪ್ತಿಯಾಗಲಿಲ್ಲ | Oneindia Kannada
     ಮುಂದಿನ 5 ದಿನ ಭಾರಿ ಮಳೆ

    ಮುಂದಿನ 5 ದಿನ ಭಾರಿ ಮಳೆ

    ಮುಂದಿನ ಐದು ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರಿ ಮಳೆಯಾಗಲಿದೆ. ಮುಂಬೈ, ಥಾಣೆ, ನವಿ ಮುಂಬೈ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮುಂದಿನ 24 ಗಂಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+