ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ

ಬೆಂಗಳೂರು, ಸೆಪ್ಟೆಂಬರ್ 09: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 09ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

 ಮಹಾರಾಷ್ಟ್ರದಲ್ಲಿ ಭಾರಿ ಮಳೆಯ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಹಾರಾಷ್ಟ್ರದ ಉತ್ತರ ಕರಾವಳಿಯಲ್ಲಿ ಯಥೇಚ್ಛ ಮಳೆಯಾಗುತ್ತಿದೆ ಇಂದು ಕೊಂಕಣ, ಮಧ್ಯ ಮಹಾರಾಷ್ಟ್ರ ಮತ್ತು ವಿದರ್ಭದಲ್ಲಿ ವರುಣನ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯ ಮುಂಬೈನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಆದರೆ ಮುಂದಿನ 24 ಗಂಟೆಗಳಲ್ಲಿ ಮುಂಬೈಹಾಗೂ ಥಾಣೆಯಲ್ಲಿ ಅಧಿಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇಷ್ಟೇ ಅಲ್ಲದೇ, ರಾಯ್​ಗಢ, ರತ್ನಗಿರಿ, ಸಿಂಧುದರ್ಗ್, ನಾಸಿಕ್, ಪುಣೆ, ಸತಾರಾ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮುಂಬೈ ಹಾಗೂ ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆರೆಯ ಪಾಲ್ಗಾರ್​ ನಗರದಲ್ಲಿ ಇಂದು ಮಳೆಯ ಅಬ್ಬರ ಜೋರಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಮಹಾರಾಷ್ಟ್ರದ ದಕ್ಷಿಣ ಕೊಂಕಣ ಪ್ರದೇಶದಲ್ಲಿ ಶನಿವಾರದವರೆಗೂ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹಮಾವಾನ ಇಲಾಖೆ ಹೇಳಿದೆ.

 ಮುಂದಿನ ಮೂರ್ನಾಲ್ಕು ದಿನ ಮಳೆ

ಮುಂದಿನ ಮೂರ್ನಾಲ್ಕು ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಛತ್ತೀಸ್ಗಢದಲ್ಲೂ ವಿಪರೀತ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆಯೆಲ್ಲೊ ಅಲರ್ಟ್‌ ನೀಡಲಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಸುಬ್ರಹ್ಮಣ್ಯ, ಭಾಗಮಂಡಲ, ಸುಳ್ಯ, ತುಮ್ರಿ, ಶಿರಾಲಿ, ಭಟ್ಕಳ, ಸಂತಹಳ್ಳಿ, ಕೋಟ, ಸಿದ್ದಾಪುರ, ಕೊಟ್ಟಿಗೆಹಾರ, ನಾಪೋಕ್ಲು, ಹೊನ್ನಾವರ, ವಿಟ್ಲ, ತಾಳಗುಪ್ಪ, ಶ್ರೀಮಂಗಲ, ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಲಿಂಗನಮಕ್ಕಿ, ಕದ್ರಾ, ಕಾರವಾರ, ಶೃಂಗೇರಿ, ಜಯಪುರ, ಜಾನ್ಮನೆ, ಹಾರಂಗಿ, ಪಣಂಬೂರು, ಮುಂಡಗೋಡ, ಮಂಡಗದ್ದೆ, ಹಡಗಲಿ, ಶಿವಮೊಗ್ಗ, ತ್ಯಾಗರ್ತಿ, ಬಾಳೆಹೊನ್ನೂರು, ಸಕಲೇಶಪುರ, ಬೆಳಗಾವಿ, ಬಂಡೀಪುರದಲ್ಲಿ ಮಳೆಯಾಗಿದೆ.

Recommended Video

    ನೀವು ಧರ್ಮಸ್ಥಳಕ್ಕೆ ಹೋಗಬೇಕಾ ? ಹಾಗಾದ್ರೆ ಈ ಸ್ಟೋರಿ ನೋಡಿ | Oneindia Kannada
     ಬೆಂಗಳೂರು ವಾತಾವರಣ ಹೇಗಿದೆ?

    ಬೆಂಗಳೂರು ವಾತಾವರಣ ಹೇಗಿದೆ?

    ನಗರದಲ್ಲಿ ಮೋಡಕವಿದ ವಾತಾವರಣವಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+