ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜುಲೈ 15: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ ಹಲವೆಡೆ ಮಳೆ ಮುಂದುವರೆದಿದ್ದು, ಹಳ್ಳಕೊಳ್ಳಗಳು ತುಂಬುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಕಂಡುಬರಲು ಶುರುವಾಗಿದೆ.

ಕೊಡಗಿನಲ್ಲಿ ತಗ್ಗಿದ ಮಳೆ, ಭರ್ತಿಯಾಗದ ಹಾರಂಗಿ ಜಲಾಶಯ...ಕೊಡಗಿನಲ್ಲಿ ತಗ್ಗಿದ ಮಳೆ, ಭರ್ತಿಯಾಗದ ಹಾರಂಗಿ ಜಲಾಶಯ...

ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂಗೆ ಒಳಹರಿವು ಹೆಚ್ಚಿರುವ ಕಾರಣ ಐದು ಕ್ರೆಸ್ಟ್ ಗೇಟ್‍ಗಳನ್ನು ಓಪನ್ ಮಾಡಲಾಗಿದ್ದು, 35 ಸಾವಿರ ಕ್ಯೂಸೆಕ್ ನೀಡನ್ನು ಹೊರಬಿಡಲಾಗ್ತಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.

Heavy Rainfall Will Occur In Coastal Karnataka

ಉಡುಪಿ, ಕೋಟಾ, ಕಾರ್ಕಳ, ಮುನಿರಾಬಾದ್, ಪಣಂಬೂರ್, ಸುಬ್ರಹ್ಮಣ್ಯ, ಮೂಡಬಿದಿರೆ, ಮುಲ್ಕಿ, ಮಂಗಳೂರು, ಭಟ್ಕಳ, ಶೃಂಗೇರಿ, ಸುಳ್ಯ, ಹಿರೆಕೆರೂರು, ಮಂಚಿಕೆರೆ, ಮೂರ್ನಾಡು, ಹಿಡ್ಕಲ್ , ತಾಳಗುಪ್ಪ, ಧರ್ಮಸ್ಥಳ, ಯಲಬುರ್ಗಾ, ಕಳಸ, ಕೊಪ್ಪದಲ್ಲಿ ಭಾರಿ ಮಳೆಯಾಗುತ್ತಿದೆ.

ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮತ್ತಷ್ಟು ಚುರುಕಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Heavy Rainfall Will Occur In Uttara Kannada, udupi, Dakshina Kannada, Rainfall occurred at most places over Coastal Karnataka and at a few places over SouthInterior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X