ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆ.14ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ(ಸೆ.14) ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವೆಡೆ ಭಾರೀ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್ ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.31 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗ ತಾಲ್ಲೂಕಿನಲ್ಲಿ 4 ಮಿ.ಮೀ. ಭದ್ರಾವತಿ ತಾಲ್ಲೂಕಿನಲ್ಲಿ 4.80 ಮಿ.ಮೀ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ 43.20 ಮಿ.ಮೀ, ಸಾಗರ ತಾಲ್ಲೂಕಿನಲ್ಲಿ 30 ಮಿ.ಮೀ. ಮಳೆಯಾಗಿದ್ದು, . ಶಿಕಾರಿಪುರ ತಾಲ್ಲೂಕಿನಲ್ಲಿ 7.20 ಮಿ.ಮೀ, ಸೊರಬ 21.40 ಮಿ.ಮೀ, ಹೊಸನಗರದಲ್ಲಿ 178.60 ಮಿ.ಮೀ ಮಳೆಯಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಮೂರರಿಂದ ನಾಲ್ಕು ದಿನಗಳವರೆಗೂ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಲಿದೆ ಎಂದು ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಭರ್ಜರಿ ಮಳೆಯಾಗುತ್ತಿದೆ.

ಮಳೆ ಆರ್ಭಟ ಮಂಗಳವಾರ ಸಹ ಮುಂದುವರಿದಿದ್ದು ತುಂಗಾ, ಶರಾವತಿ, ಭದ್ರಾ ನದಿಗಳ ನೀರಿನ ಮಟ್ಟ ಮತ್ತೆ ಏರಿಕೆಯಾಗಿದೆ.

ಭದ್ರಾ ಜಲಾಶಯದ ಒಳಹರಿವು 7,800 ಕ್ಯೂಸೆಕ್‌ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಕ್ರಸ್ಟ್‌ಗೇಟ್‌ಗಳನ್ನು ಮತ್ತೊಮ್ಮೆ ತೆರೆದು ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು 33 ಸಾವಿರ ಕ್ಯೂಸೆಕ್‌ಗೆ ಮತ್ತು ತುಂಗಾ ನದಿಯ ಹರಿವು 20 ಸಾವಿರ ಕ್ಯೂಸೆಕ್‌ಗೆ ಏರಿದೆ.

ಸೋಮವಾರ ಸಹ ಇಡೀ ದಿನ ಬಿಟ್ಟು ಬಿಟ್ಟು ಮಳೆ ಸುರಿಯಿತು. ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ತೀವ್ರತೆ ಜೋರಾಗಿದೆ. ಜಿಲ್ಲೆಯಲ್ಲಿ ಸರಾಸರಿ 8.6 ಮಿ.ಮೀ. ಮಳೆಯಾಗಿದೆ. ಮಾಸ್ತಿಕಟ್ಟೆಯಲ್ಲಿ ಅತಿಹೆಚ್ಚು 136 ಮಿ.ಮೀ., ಹುಲಿಕಲ್‌ನಲ್ಲಿ 124, ಲಿಂಗನಮಕ್ಕಿಯಲ್ಲಿ 82 ಮಿ.ಮೀ. ಮಳೆಯಾಗಿದೆ.

ತಾಲೂಕುವಾರು ಸರಾಸರಿ ಹೊಸನಗರದಲ್ಲಿ 178, ತೀರ್ಥಹಳ್ಳಿಯಲ್ಲಿ 43, ಸಾಗರದಲ್ಲಿ 30, ಸೊರಬದಲ್ಲಿ 21, ಶಿಕಾರಿಪುರದಲ್ಲಿ 7, ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಲಾ 4 ಮಿ.ಮೀ. ಮಳೆಯಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಮಂಕಿ, ತುಮ್ರಿ, ಹೊನ್ನಾವರ, ಭಾಗಮಂಡಲ, ಸಂತಹಳ್ಳಿ, ಆಗುಂಬೆ, ಸಿದ್ದಾಪುರ, ಜಾನ್ಮನೆ, ಅಗ್ರಹಾರ ಕೋಣಂದೂರು, ಕದ್ರ, ತೀರ್ಥಹಳ್ಳಿ, ತಾಳಗುಪ್ಪ, ಮಾಣಿ, ಧರ್ಮಸ್ಥಳ, ಅಂಕೋಲ, ಗೋಕರ್ಣ, ಸೋಮವಾರಪೇಟೆ, ಪೊನ್ನಂಪೇಟೆ, ಸಕಲೇಶಪುರ, ಮಂಡಗದ್ದೆ, ವಿರಾಜಪೇಟೆ, ಮಂಚಿಕೆರೆ, ಯಲ್ಲಾಪುರ, ಕಳಸ, ಬನವಾಸಿ, ಜಯಪುರ, ಪುತ್ತೂರು, ಕೋಟ, ನಿಪ್ಪಾಣಿ, ಬೈಲಹೊಂಗಲ, ಲಕ್ಷ್ಮೇಶ್ವರ, ಸಕೇಶ್ವರ, ಆನವಟ್ಟಿ, ಶಿಕಾರಿಪುರ, ಬಾಳೆಹೊನ್ನೂರು, ಪುತ್ತೂರು, ಮತ್ತಿಕೊಪ್ಪದಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಉತ್ತರ ಕರ್ನಾಟಕದಲ್ಲಿ ಮಳೆ

ಉತ್ತರ ಕರ್ನಾಟಕದಲ್ಲಿ ಮಳೆ

ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ನಿರೀಕ್ಷೆ ಇದೆ. ಇನ್ನು ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು. ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

 ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ?

ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ?

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ(ಸೆ.14) ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವೆಡೆ ಭಾರೀ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Recommended Video

IPL ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಸಕ್ಸಸ್ ವಿರಾಟ್ ಮತ್ತು ABD ಗೆ‌ ಇನ್ನೂ ಸಿಕ್ಕಿಲ್ಲ | Oneindia Kannada

English summary
Meteorological Department predicted that Heavy Rainfall Will Occur In Coastal Karnataka From September 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X