• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಗಸ್ಟ್ 30ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಆಗಸ್ಟ್ 26: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಷ್ಟೇ ಅಲ್ಲದೆ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ.

ಆಗಸ್ಟ್ 28 ರಿಂದ 2 ದಿನ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಆಗಸ್ಟ್ 28 ರಿಂದ 2 ದಿನ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಆ. 28ರಿಂದ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.

ಇನ್ನು, ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಒಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್​ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹಮಾಮಾನ ಇಲಾಖೆ ಮಾಹಿತಿ ನೀಡಿದೆ.

 ಕೋಲಾರದಲ್ಲಿ ಭಾರಿ ಮಳೆ

ಕೋಲಾರದಲ್ಲಿ ಭಾರಿ ಮಳೆ

ಕಳೆದ ರಾತ್ರಿ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದಾಗಿ ರೈತರು ಕಂಗಾಲಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ಜಲಾವೃತಗೊಂಡಿದೆ. ಮಳೆ ನೀರು ಹೊಲಕ್ಕೆ ನುಗ್ಗಿದ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ನಾನಾ ಬೆಳೆಗಳು ಮುಳುಗಡೆಯಾಗಿವೆ.
ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸದ್ಯ ಹಾನಿಗೊಳಗಾದ ರೈತರ ತೋಟಗಳಿಗೆ ಬೇಟಿಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ಭಾರೀ ಮಳೆಯಾದ ಪರಿಣಾಮ ಒತ್ತುರಿಯಾಗಿರುವ ರಾಜಕಾಲುವೆ ಹಾಗೂ ಹಳ್ಳಕೊಳ್ಳದ ನೀರು ನೇರವಾಗಿ ರೈತರ ತೋಟಗಳನ್ನ ಆವರಿಸಿದೆ. ಪರಿಣಾಮ ರೈತರು ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳೆಲ್ಲ ಜಲಾವೃತಗೊಂಡಿವೆ. ಸಾಲ ಮಾಡಿ, ಕಷ್ಟಪಟ್ಟು ಬೆಳೆದಿದ್ದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ
ಭಾರೀ ಮಳೆಯಿಂದಾಗಿ ಕೋಲಾರ ತಾಲೂಕಿನ ನರಸಾಪುರ ಹಾಗೂ ವೇಮಗಲ್ ಸುತ್ತಮುತ್ತ ಬೆಳೆಗಳು ನಾಶವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿವೆ. ಟೊಮ್ಯಾಟೋ ನೀರಿನಲ್ಲಿ ತೇಲಿ ಹೋದರೆ, ಪಂಪ್ ಸೆಟ್‍ಗಳು ಜಲಾವೃತಗೊಂಡಿವೆ, ಡ್ರಿಪ್ ಪೈಪ್‍ಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

 ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಥೊಂಡೆಭಾವಿಯಲ್ಲಿ 13 ಸೆಂ.ಮೀ ಮಳೆಯಾಗಿದೆ, ಚಿಕ್ಕಬಳ್ಳಾಪುರ, ಮುಳಬಾಗಿಲು, ಶಿಡ್ಲಘಟ್ಟ, ಗೌರಿಬಿದನೂರಿನಲ್ಲಿ ಮಳೆಯಾಗಿದೆ.
ಚಿಂತಾಮಣಿ, ರಾಯಲ್‌ಪಾಡು, ಕೊಲ್ಲೂರು, ಬಲ್ಕಿ, ಚಿಂತಾಮಣಿ, ದೇವನಹಳ್ಳಿ, ಹೆಸರಘಟ್ಟ, ಗುಡಿಬಂಡೆ, ಬೈಲಹೊಂಗಲ, ಕೋಟ, ತಿಪಟೂರು, ನುಗ್ಗೆಹಳ್ಳಿ, ಶಿವಮೊಗ್ಗ, ಸೋಮವಾರಪೇಟೆ, ಮಧುಗಿರಿ, ಗುಬ್ಬಿ, ಕಲಬುರಗಿಯಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  ಸಿದ್ಧರಾಮಯ್ಯ ನ ಯಾರು ಟಚ್ ಮಾಡಕ್ಕ ಆಗಲ್ಲಾ? | Oneindia Kannada
   ಬೆಂಗಳೂರಲ್ಲೂ ಮಳೆ ಸಾಧ್ಯತೆ

  ಬೆಂಗಳೂರಲ್ಲೂ ಮಳೆ ಸಾಧ್ಯತೆ

  ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿದ್ದು, ರೈತರ ಮೊಗದಲ್ಲಿ ಖುಷಿ ಕಾಣುತ್ತಿದೆ. ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

  English summary
  Meteorological department predicted that Heavy Rainfall Will Occur In Coastal Karnataka Till August 30.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X