ಅಕ್ಟೋಬರ್ 22ರವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಅಕ್ಟೋಬರ್ 18: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕಳೆದ ಎರಡು ದಿನಗಳಲ್ಲಿ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇದರ ಪರಿಣಾಮ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ ವಿದ್ಯುತ್‌ ಕಂಬಗಳು ಮುರಿದು ಬಿದ್ದು ಅಪಾರ ನಷ್ಟವಾಗಿದೆ. ಭತ್ತದ ಕೃಷಿ ಗದ್ದೆಗಳಿಗೆ ನೀರು ನುಗ್ಗಿದ್ದು, ರೈತರಲ್ಲಿ ಭೀತಿ ಮೂಡಿಸಿದೆ.

ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗಂಗಾದ ಪಶ್ಚಿಮ ಬಂಗಾಳ, ಉತ್ತರ ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಕೇರಳದ ಕೆಲವು ಭಾಗಗಳು, ದಕ್ಷಿಣ ಒಳ ಕರ್ನಾಟಕ, ದಕ್ಷಿಣ ಛತ್ತೀಸ್‌ಗಢ್, ಲಕ್ಷದ್ವೀಪ, ವಿದರ್ಭ ಮತ್ತು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ದೆಹಲಿ, ಪಂಜಾಬ್, ಹರಿಯಾಣ, ಮಧ್ಯಪ್ರದೇಶ ಮತ್ತು ಈಶಾನ್ಯ ರಾಜಸ್ಥಾನ, ಛತ್ತೀಸ್‌ಗಢ್, ಮಧ್ಯಪ್ರದೇಶ, ಜಾರ್ಖಂಡ್, ಉತ್ತರ ಪ್ರದೇಶ, ಬಿಹಾರ, ರಾಯಲಸೀಮ ಮತ್ತು ತಮಿಳುನಾಡುಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಪೂರ್ವ ರಾಜಸ್ಥಾನ, ಉತ್ತರ ಪ್ರದೇಶದ ಮಧ್ಯ ಮತ್ತು ಪಶ್ಚಿಮ ಭಾಗ ಮತ್ತು ಜಮ್ಮು ಕಾಶ್ಮೀರದಲ್ಲಿ ಸಣ್ಣ ಪ್ರಮಾಣದ ಮಳೆಯಾಗಬಹುದು.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಸಂಜೆಯಿಂದ ಗುಡುಗು ಸಹಿತ ಭಾರಿ ಮಳೆಯಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ರಾತ್ರಿ ಹೊತ್ತು ಸುರಿದ ಮಳೆ, ಗಾಳಿ ಸಿಡಿಲು, ಗುಡುಗಿಗೆ ಕೆಲವು ಕಡೆಗಳಲ್ಲಿ ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ನಗರ ಪ್ರದೇಶದಲ್ಲಿ ಶನಿವಾರ ರಾತ್ರಿಯ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿ ಮಳೆ ನೀರು ನುಗ್ಗಿ ಅಪಾರ ಸಮಸ್ಯೆಯಾಗಿತ್ತು. ಕೆಲವು ಭಾಗದಲ್ಲಿ ಮಳೆ ನೀರು ಭಾನುವಾರ ಬೆಳಗ್ಗಿನವರೆಗೂ ಕಡಿಮೆಯಾಗಿಲ್ಲ.

ಇನ್ನೆರಡು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಇರಲಿದ್ದು, ಸಾಧಾರಣದಿಂದ ಭಾರಿ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ನೀರು ಮಾರ್ಗದ ಭಟ್ರ ಬೈಲಿನಲ್ಲಿ ಆವರಣ ಗೋಡೆಯ ಜತೆಗೆ ವಿದ್ಯುತ್‌ ಕಂಬ ಮುರಿದು ಬಿದ್ದು ಮನೆಯೊಂದಕ್ಕೆ ಹಾನಿಯಾಗಿದೆ. ಬಜಾಲ್‌ ಪ್ರದೇಶದಲ್ಲಿ ಮನೆಯೊಂದು ಪೂರ್ಣವಾಗಿ ಹಾನಿಯಾಗಿದ್ದು, ಅಲ್ಲಿನ ನಿವಾಸಿಗಳನ್ನು ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಲಾಗಿದೆ. ನೀರು ಮಾರ್ಗದ ವಂಟಾರ ಬೈಲಿನ ಕೃಷಿ ಭೂಮಿಗೆ ಮಳೆಯ ನೀರು ತೋಡಿನ ಮೂಲಕ ಹರಿದು ಬಂದು ಅಪಾರ ಹಾನಿಯಾಗಿದೆ. ಬಂಗ್ರ ಕೂಳೂರಿನಲ್ಲಿ ಮಳೆಗೆ ಮನೆಯೊಂದಕ್ಕೆ ಸಂಪೂರ್ಣ ಹಾನಿಯಾಗಿದೆ.

ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.

ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಗಳ ಪರಿಣಾಮವಾಗಿ ಮಳೆಯಾಗುತ್ತಿದೆ, ಆದರೆ ಅಕ್ಟೋಬರ್ 18ರಿಂದ ಮಳೆ ದಿಢೀರ್‌ ಕಡಿಮೆಯಾಗಲಿದ್ದು, 21ರವರೆಗೆ ಹೆಚ್ಚು ಮಳೆಯಾಗುವ ಯಾವುದೇ ಸೂಚನೆಗಳಿಲ್ಲ ಎಂದು ಇಲಾಖೆ ತಿಳಿಸಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಧರ್ಮಸ್ಥಳ, ಮಂಗಳೂರು, ಪೊನ್ನಂಪೇಟೆ, ಸುಳ್ಯ, ಸರಗೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಾಗಡಿ, ಕೃಷ್ಣರಾಜಪೇಟೆ, ಮಂಗಳೂರು ವಿಮಾನ ನಿಲ್ದಾಣ, ಗೋಪಾಲ್‌ನಗರ, ಬಸವಕಲ್ಯಾಣ, ಪುತ್ತೂರು, ಬಾಲ್ಕಿ, ಬೆಳ್ತಂಗಡಿ, ಚಾಮರಾಜನಗರ, ಪಿರಿಯಾಪಟ್ಟಣ, ಕೋಣನೂರು, ಮಂಡ್ಯ, ಕೊಟ್ಟಿಗೆಹಾರ, ಭಾಗಮಂಡಲ, ಉಡುಪಿ, ಕಾರ್ಕಳ, ಮದ್ದೂರು, ಮಂಕಿ, ಚಿಂಚೋಳಿ, ವಿರಾಜಪೇಟೆ, ಮಳವಳ್ಳಿ, ಬ್ರಹ್ಮಾವರ, ಸೋಮವಾರಪೇಟೆ, ನಾಪೋಕ್ಲು, ಹೆಸರಘಟ್ಟದಲ್ಲಿ ಮಳೆಯಾಗಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ನೈಋತ್ಯ ಮುಂಗಾರು ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಿರಲಿದೆ, ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ದಕ್ಷಿಣ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ, ಒಡಿಶಾದ ದಕ್ಷಿಣ ಕರಾವಳಿ, ಆಂಧ್ರಪ್ರದೇಶದ ಕರಾವಳಿ, ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆಯಾಗಿದೆ.ಕರಾವಳಿ ಕರ್ನಾಟಕದಲ್ಲಿ ಮತ್ತು ಅಸ್ಸಾಂ ಮತ್ತು ಬಿಹಾರದ ಪ್ರತ್ಯೇಕ ಪಾಕೆಟ್‌ಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಲಕ್ಷದ್ವೀಪ ಮತ್ತು ಗಂಗಾ ಪಶ್ಚಿಮ ಬಂಗಾಳದಲ್ಲಿ ಒಂದು ಅಥವಾ ಎರಡು ತೀವ್ರತರವಾದ ಲಘು ಮಳೆಯಾಗಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್‌ಗಡ್, ತೆಲಂಗಾಣ ಮತ್ತು ಮೇಘಾಲಯದಲ್ಲಿ ಸಾಧಾರಣ ಮಳೆಯಾಗಿದೆ ಎಂದು ವರದಿಯಾಗಿದೆ.

Recommended Video

    ಮುಂಬೈನಲ್ಲಿ ಕೋವಿಡ್ ಪ್ರಕರಣಗಳು ಸೊನ್ನೆ | Oneindia Kannada
     ಅತಿ ಹೆಚ್ಚು ಗರಿಷ್ಠ ಉಷ್ಣಾಂಶ

    ಅತಿ ಹೆಚ್ಚು ಗರಿಷ್ಠ ಉಷ್ಣಾಂಶ

    ಶಿರಾಲಿಯಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ ಬೀದರ್‌ನಲ್ಲಿ 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+