ಕರ್ನಾಟಕದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 15: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.

Recommended Video

      ಹವಾಮಾನ ಇಲಾಖೆಯಿಂದ ಭಾರಿ ಮಳೆ ಸೂಚನೆ! | Oneindia Kannada

      ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.

      ಕರ್ನಾಟಕದಲ್ಲಿ ಕಳೆದ 2 ವಾರಗಳಿಂದ ಮತ್ತೆ ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ ಸ್ವಲ್ಪ ಬಿಡುವು ನೀಡಿದ್ದ ಮಳೆ, ಕಳೆದ 2 ವಾರದಿಂದ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದಾನೆ.

      ಕಳೆದ 2 ವಾರದಿಂದ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಜುಲೈ ತಿಂಗಳಾಂತ್ಯದಲ್ಲಿ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ, ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ.

      ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ.

      ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜಾರ್ಖಂಡ್, ಬಿಹಾರ, ಒರಿಸ್ಸಾ, ಆಂಧ್ರಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಇಂದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.

      ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಇಂದು ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

      ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

      ಇನ್ನು, ಉತ್ತರ ಒಳನಾಡಿನಲ್ಲೂ ಇಂದು ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

      ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕೊಡಗಿನಲ್ಲಿ ಮಳೆಯಾಗಿರುವುದರಿಂದ ಹಾರಂಗಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ.

       ಮಳೆಯಾಗಿರುವ ಪ್ರದೇಶಗಳು

      ಮಳೆಯಾಗಿರುವ ಪ್ರದೇಶಗಳು

      ಭಾಗಮಂಡಲ, ಮಂಡ್ಯ, ಧರ್ಮಸ್ಥಳ, ಪುತ್ತೂರು, ಸುಳ್ಯ, ಆಗುಂಬೆ, ಹೊಸಪೇಟೆ, ಪಣಂಬೂರು, ಮುಲ್ಕಿ, ಕೆಆರ್‌ ಪೇಟೆ, ಸಂಡೂರು, ಸಿದ್ದಾಪುರ, ಕೆಂಭಾವಿ, ಮುಂಡಗೂಡು, ತಿ ನರಸೀಪುರ, ಬೆಳಗಾವಿಯಲ್ಲಿ ಮಳೆಯಾಗಿದೆ.

       ಮಳೆಯ ಆರ್ಭಟ ಹೆಚ್ಚು

      ಮಳೆಯ ಆರ್ಭಟ ಹೆಚ್ಚು

      ದಕ್ಷಿಣ ಒಳನಾಡಿನಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಆ. 17ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ.

       ಉತ್ತರ ಕರ್ನಾಟಕದಲ್ಲೂ ಮಳೆ

      ಉತ್ತರ ಕರ್ನಾಟಕದಲ್ಲೂ ಮಳೆ

      ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.
      ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಂಗಳವಾರದವರೆಗೂ ಚದುರಿದ ಮಳೆಯಾಗಲಿದೆ.
      ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ.
      ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಭಾರೀ ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚು ನಷ್ಟವಾಗಿದೆ.

       ಕರಾವಳಿ ಜಿಲ್ಲೆಗಳಲ್ಲಿ ಮಳೆ

      ಕರಾವಳಿ ಜಿಲ್ಲೆಗಳಲ್ಲಿ ಮಳೆ

      ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಹೆಚ್ಚಾಗಿದ್ದು, ಇಂದಿನಿಂದ ಆಗಸ್ಟ್ 17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+