ಡಿಸೆಂಬರ್ 06 ರವರೆಗೂ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಡಿಸೆಂಬರ್ 02: ರಾಜ್ಯದಲ್ಲಿ ಡಿಸೆಂಬರ್ 06ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.
ಮುಂದಿನ 5 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ನಲ್ಲಿ ಒಣಹವೆ ಮುಂದುವರೆಯಲಿದೆ.
ಗುಜರಾತ್ನಲ್ಲಿ ಇಂದಿನಿಂದ ಮಳೆ ಪ್ರಾರಂಭವಾಗಲಿದೆ.
ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ : ಹವಾಮಾನ ಇಲಾಖೆ ಗುಜರಾತ್ನಲ್ಲಿ ಮಳೆಯ ಕುರಿತು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲಿ ಡಿಸೆಂಬರ್ 1 ಮತ್ತು 2 ರಂದು ಮಳೆಯಾಗುವ ಸಂಭವವಿದೆ. ಇನ್ನು ಮುಂಬೈನಲ್ಲಿ ಇಂದಿನಿಂದ ಗುರುವಾರದವರೆಗೆ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ. ಇದಲ್ಲದೇ ಡಿಸೆಂಬರ್ 5 ಮತ್ತು 6 ರಂದು ದೇಶದ ರಾಜಧಾನಿ ದೆಹಲಿಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈ ಸಮಯದಲ್ಲಿ ಪರ್ವತ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಹಿಮಪಾತದ ಎಚ್ಚರಿಕೆಯನ್ನು ಕೂಡಾ ನೀಡಲಾಗಿದೆ. ಇದಲ್ಲದೆ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಳೆಯ ನಂತರ ಏರಲಿದೆ ಚಳಿ : ಹವಾಮಾನ ಇಲಾಖೆ ಪ್ರಕಾರ, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯ ನಂತರ, ಚಳಿ ಹೆಚ್ಚಾಗುತ್ತದೆ. ಪರ್ವತ ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಬಯಲು ಪ್ರದೇಶಗಳಲ್ಲಿ ಚಳಿ ಹೆಚ್ಚಾಗಲಿದೆ.
ದಕ್ಷಿಣದಲ್ಲಿಯೂ ಮಳೆಯ ಅಬ್ಬರ : ಉತ್ತರ ಭಾರತದಲ್ಲಿ ಮಳೆಯ ಎಚ್ಚರಿಕೆ ನೀಡಿದ್ದರೆ, ದೇಶದ ದಕ್ಷಿಣದಲ್ಲಿ ಭಾರೀ ಮಳೆ ಇನ್ನೂ ಸಮಸ್ಯೆಯಾಗಿದೆ. ರಾಮೇಶ್ವರಂನಲ್ಲಿ ಕಳೆದ 5 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಭಾರೀ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.
ಇದರೊಂದಿಗೆ ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಮುಂದುವರಿದಿದೆ. ಡಿಸೆಂಬರ್ 2ರವರೆಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಳೆಯಾಗಿರುವ ಪ್ರದೇಶಗಳು
ಕುಂದಾಪುರ, ಶಿರಾಲಿ, ಭಟ್ಕಳ, ಕೋಟಾ, ಕಾರ್ಕಳ, ಹೊನ್ನಾವರ, ಕಾರವಾರ, ಗೇರುಸೊಪ್ಪ, ಗೋಕರ್ಣ, ಚನ್ನಗಿರಿ, ಬಂಟವಾಳ, ಮಾಣಿ, ಧರ್ಮಸ್ಥಳ, ಪುತ್ತೂರು, ಮಂಕಿ, ಬನವಾಸಿ, ಮಂಚಿಕೆರೆ, ಯಲ್ಲಾಪುರ,ಕ್ಯಾಸಲ್ ರಾಕ್, ಆಗುಂಬೆ, ಹಾಸನ, ಮೈಸೂರು, ಮಂಜನಗೂಡು, ಬಾಗೇಪಲ್ಲಿಯಲ್ಲಿ ಮಳೆಯಾಗಲಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ. 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ವಾತಾವರಣ ಹೇಗಿರಲಿದೆ?
ಮುಂದಿನ 24 ಗಂಟೆ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ, ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.
ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ನಲ್ಲಿ ಒಣಹವೆ ಮುಂದುವರೆಯಲಿದೆ.
ಗುಜರಾತ್ನಲ್ಲಿ ಇಂದಿನಿಂದ ಮಳೆ ಪ್ರಾರಂಭವಾಗಲಿದೆ.

ಅತಿ ಕನಿಷ್ಠ ಉಷ್ಣಾಂಶ
ಬೀದರ್ನಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.