ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 8ರವರೆಗೆ ಮಳೆ ಜೋರು
ಬೆಂಗಳೂರು, ಆಗಸ್ಟ್ 03: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 08ರವರಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
Recommended Video
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ , ಕೊಪ್ಪಳ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗಲಿದೆ.
ಗಾಳಿಯು ಗಂಟೆಗೆ 40-50 ವೇಗದಲ್ಲಿ ಬೀಸುತ್ತಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಿರಲು ಸೂಚನೆ ನೀಡಲಾಗಿದೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ. ಶನಿವಾರ ಬೆಂಗಳೂರಿನ ಬಹುತೇಕ ಕಡೆ ಭಾರಿ ಮಳೆ ಸುರಿದಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.

ಕರ್ನಾಟಕದ ಯಾವ ಭಾಗದಲ್ಲಿ ಹೆಚ್ಚು ಮಳೆಯಾಗಿದೆ
ಪಣಂಬೂರು, ಕೊಲ್ಲೂರು, ಮಂಗಳೂರು ಏರ್‌ಪೋರ್ಟ್, ಮೂಡಬಿದಿರೆ, ಕೋಟಾ, ಕುಂದಾಪುರ, ಹೊನ್ನವಾರ, ಶಿರಾಲಿ, ಭಟ್ಕಳ, ಆಗುಂಬೆಯಲ್ಲಿ ಮಳೆಯಾಗಿದೆ.

ಸಾಧಾರಣ ಮಳೆಯಾದ ಪ್ರದೇಶಗಳು
ಉಡುಪಿ, ಸಿದ್ದಾಪುರ, ಮುಲ್ಕಿ, ಉಪ್ಪಿನಂಗಡಿ, ಕೊಟ್ಟಿಗೆಹಾರ, ಕುಮಟ, ಮೂರ್ನಾಡು,ಧರ್ಮಸ್ಥಳ, ಪುತ್ತೂರು, ಅಂಕೋಲಾ, ರಾಯಲ್ಪಾಡು, ಮೂಡಿಗೆರೆ, ಭಾಗಮಂಡಲ, ಚಿಂತಾಮಣಿ, ತಾಳಗುಪ್ಪ, ತೀರ್ಥಹಳ್ಳಿ, ಹೊಸನಗರ, ಮಂಕಿ, ಕದ್ರ, ಯಲ್ಲಾಪುರ, ಬೆಂಗಳೂರು ಎಚ್‌ಎಎಲ್, ಬನವಾಸಿ, ಗೌರಿಬಿದನೂರು, ಕೊಪ್ಪ, ಶಿಕಾರಿಪುರ, ಮಡಿಕೇರಿ, ಕೋಲಾರ, ಮಾಲೂರು, ಸಕಲೇಶಪುರದಲ್ಲಿ ಮಳೆಯಾಗಿದೆ.

ರಾಜ್ಯಾದ್ಯಂತ ಗುಡುಗು ಸಹಿತ ಮಳೆ
ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಜೋರು ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮಾತ್ರವಲ್ಲದೇ ರಾಜಧಾನಿ ಬೆಂಗಳೂರಿನಲ್ಲೂ ಮಳೆ ಸುರಿಯುತ್ತಿದೆ. ನಗರದ ಹೊರವಲಯ ನೆಲಮಂಗಲ ನಗರ ಸೇರಿದಂತೆ ಸುಂಕದಕಟ್ಟೆ, ಬ್ಯಾಡರಹಳ್ಳಿ, ನಾಗರಬಾವಿ, ಬನಶಂಕರಿ, ಜಯನಗರ, ಮಲ್ಲೇಶ್ವರಂ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಕೆ.ಆರ್ ಪುರಂ, ಟೌನ್ಹಾಲ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ರಭಸವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ.ಇನ್ನು, ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಮಳೆಗಾಲದ ನಾಲ್ಕು ತಿಂಗಳ ದ್ವಿತೀಯಾರ್ಧದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.97ರಷ್ಟು ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.











Click it and Unblock the Notifications