ಮುಂದಿನ 5 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಡಿಸೆಂಬರ್ 01: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

ಗುಜರಾತ್​​ನಲ್ಲಿ ಇಂದಿನಿಂದ ಮಳೆ ಪ್ರಾರಂಭವಾಗಲಿದೆ. ಗುಜರಾತ್​​ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ನವೆಂಬರ್​ ಇಂದಿನಿಂದ ಡಿಸೆಂಬರ್​ 2ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ.

ಅಮ್ರೇಲಿ, ಜುನಾಗಢ್, ಗಿರ್ ಸೋಮನಾಥ್, ಬೊಟಾಡ್ ಮತ್ತು ಭಾವನಗರ ಸೇರಿದಂತೆ ಸೌರಾಷ್ಟ್ರ ಜಿಲ್ಲೆಗಳ ಆನಂದ್, ಭರೂಚ್, ನವಸಾರಿ, ವಲ್ಸಾದ್ ಸೂರತ್, ಡ್ಯಾಂಗ್ಸ್ ಮತ್ತು ತಾಪಿಯಲ್ಲಿ ಪಂಚಮಹಲ್, ದಾಹೋದ್, ಛೋಟಾ ಉದೇಪುರ್ ಸೇರಿದಂತೆ ಡಿಸೆಂಬರ್ 1ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.

ಡಿಸೆಂಬರ್ 1 ಮತ್ತು 2ರಂದು ಗುಜರಾತ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. IMD ಗುಜರಾತ್‌ನ ಆನಂದ್, ಭರೂಚ್, ನವಸಾರಿ, ವಲ್ಸಾದ್, ಅಮ್ರೇಲಿ ಮತ್ತು ಭಾವನಗರ ಜಿಲ್ಲೆಗಳಲ್ಲಿ ಡಿಸೆಂಬರ್ 1ಕ್ಕೆ ಆರೆಂಜ್ ಅಲರ್ಟ್ ಮತ್ತು ಡಿಸೆಂಬರ್ 2 ಕ್ಕೆ ಹಳದಿ ಅಲರ್ಟ್ ಘೋಷಿಸಿದೆ.

ಉತ್ತರ ಮತ್ತು ದಕ್ಷಿಣ ಗುಜರಾತ್ ಕರಾವಳಿಯಲ್ಲಿ ಇಂದಿನಿಂದ ಡಿಸೆಂಬರ್ 2 ರವರೆಗೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಅಕಾಲಿಕ ಮಳೆಯಿಂದಾಗಿ ಕಟಾವು ಹಾಗೂ ಬೆಳೆದು ನಿಂತಿರುವ ಬೆಳೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರೈತರಿಗೆ ಸೂಚಿಸಲಾಗಿದೆ.

ದಕ್ಷಿಣ ಗುಜರಾತ್‌ನ ಎಲ್ಲಾ ಜಿಲ್ಲೆಗಳಲ್ಲಿ ಅಹಮದಾಬಾದ್, ಆನಂದ್, ಖೇಡಾ, ಪಂಚಮಹಲ್, ದಾಹೋದ್, ಸುರೇಂದ್ರನಗರ, ರಾಜ್‌ಕೋಟ್, ಪೋರಬಂದರ್, ಜುನಾಗಢ್, ಅಮ್ರೇಲಿಯಲ್ಲಿ ಗುಡುಗು, ಮಿಂಚು ಹಾಗೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯದಲ್ಲಿ ಡಿ.5ರವರೆಗೆ ಹಿಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಸ್ಟ್ರಫ್ನಿಂದ ಡಿಸೆಂಬರ್ 1 ರಂದು ವಾಯುಬಾರ ಕುಸಿತವಾಗಲಿದೆ. ಇದು ಒಡಿಶಾ ಮಾರ್ಗವಾಗಿ ಸಾಗಿದರೆ ರಾಜ್ಯಕ್ಕೆ ಮಳೆ ತೊಂದರೆ ಇಲ್ಲ. ಆದರೆ ಆಂಧ್ರ, ತಮಿಳುನಾಡು ಕರಾವಳಿಗೆ ಅಪ್ಪಳಿಸಿದರೆ ರಾಜ್ಯದಲ್ಲಿ ಮತ್ತೆ ಅಧಿಕ ಮಳೆ ನಿರೀಕ್ಷಿಸಬಹುದು.ಮುಂದಿನ ಐದು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಬೀಳುವ ಸಾಧ್ಯತೆ ಇದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಮುಳಬಾಗಿಲಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಭರಮಸಾಗರ, ಕೋಲಾರ, ರಾಂಪುರ, ಹೊಸಪೇಟೆ, ಚಿಂತಾಮಣಿ, ಮುನಿರಾಬಾದ್, ಕಂಪ್ಲಿ, ಸಂಡೂರು, ಹರಪನಹಳ್ಳಿ, ಗೌರಿಬಿದನೂರು, ಧರ್ಮಸ್ಥಳ, ಗುಂಡ್ಲುಪೇಟೆ, ಶ್ರೀನಿವಾಸಪುರ, ಕುಡತಿನಿ, ಹಡಗಲಿ, ದಾವಣಗೆರೆ, ಮೊಳಕಾಲ್ಮೂರು, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಕೊರಟಗೆರೆ, ಮಧುಗಿರಿಯಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ. 25 ಡಿಗ್ರ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 23.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 22.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 22.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

 ಅತಿ ಕನಿಷ್ಠ ಉಷ್ಣಾಂಶ

ಅತಿ ಕನಿಷ್ಠ ಉಷ್ಣಾಂಶ

ಬಾಗಲಕೋಟೆಯಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+