ಅ.13ರವರೆಗೂ ರಾಜ್ಯದಲ್ಲಿ ಭಾರಿ ಮಳೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಅಕ್ಟೋಬರ್ 09: ರಾಜ್ಯದಲ್ಲಿ ಅಕ್ಟೋಬರ್ 13ರವರೆಗೂ ಮಳೆ ಮುಂದುವರೆಯಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅ.9ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೆ ಮಳೆ ಆರಂಭವಾಗಿದ್ದು, ಕೆಲ ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಇದ್ದರೆ, ಇನ್ನು ಕೆಲವೆಡೆ ಹೆಚ್ಚಿನ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಳೆಗಾಲದ ನಿರ್ವಹಣೆಗಾಗಿ 63 ಉಪವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಯನ್ನು ಆರಂಭಿಸಿದೆ. ಅಕ್ಟೋಬರ್ ಅಂತ್ಯದವರೆಗೂ ಈ ನಿಯಂತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ ಎಂದು ಬಿಬಿಎಂಪಿ ತಿಳಿಸಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಕೊಪ್ಪಳ, ಚಿಂತಾಮಣಿ, ಶಿರಾ, ಚಿಕ್ಕನಹಳ್ಳಿ, ಪಾವಗಡ, ರಾಯಲಪಾಡು, ಬೆಳ್ತಂಗಡಿ, ಹುಕ್ಕೇರಿ, ನಿಪ್ಪಾಣಿ, ಕೋಲಾರ, ಮಧುಗಿರಿ, ಸಂಕೇಶ್ವರ, ಮತ್ತಿಕೊಪ್ಪ, ರಾಮದುರ್ಗ, ದಾವಣಗೆರೆ, ಶಿಡ್ಲಘಟ್ಟ, ಗೌರಿಬಿದನೂರು, ಸಿದ್ದಾಪುರ, ಚಿಕ್ಕೋಡಿ, ಬೇವೂರು, ಎಲೆಕ್ಟ್ರಾನಿಕ್‌ಸಿಟಿ, ಅರಕಲಗೂಡು, ಹೊಸಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವೃಣವಿದೆ, ಶುಕ್ರವಾರ ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅತಿ ಹೆಚ್ಚು ಉಷ್ಣಾಂಶ

ಅತಿ ಹೆಚ್ಚು ಉಷ್ಣಾಂಶ

ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೀದರ್‌ನಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಮಧ್ಯ ಮಹಾರಾಷ್ಟ್ರ, ದಕ್ಷಿಣ ಕೊಂಕಣ, ಗೋವಾ, ದಕ್ಷಿಣ ಅಸ್ಸಾಂ, ಮೇಘಾಲಯ, ತ್ರಿಪುರ, ಆಂಧ್ರದ ಕರಾವಳಿ, ರಾಯಲಸೀಮೆ ಹಾಗೂ ಕರ್ನಾಟಕ ಕರಾವಳಿಯಲ್ಲಿ ಅಧಿಕ ಮಳೆ ಮುನ್ಸೂಚನೆ ನೀಡಲಾಗಿದೆ. ಪಶ್ಚಿಮ ಬಂಗಾಳ, ಗೋವಾ, , ಛತ್ತೀಸ್‌ಗಢ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ದೆಹಲಿ, ಜಾರ್ಖಂಡ್, ಗುಜರಾತ್​ ರಾಜ್ಯಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ವಾತಾವರಣ ಹೇಗಿರಲಿದೆ?

ರಾಜ್ಯದಲ್ಲಿ ವಾತಾವರಣ ಹೇಗಿರಲಿದೆ?

ರಾಜ್ಯದಲ್ಲಿ ಮುಂದಿನ 24 ಗಂಟೆ ಮೋಡಕವಿದ ವಾತಾವರಣವಿರಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ವಿದರ್ಭ, ಲಕ್ಷದ್ವೀಪ, ಕರಾವಳಿ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ಭಾರತದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+