ಸೆಪ್ಟೆಂಬರ್ 8ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಸೆಪ್ಟೆಂಬರ್ 03: ಸೆಪ್ಟೆಂಬರ್ 8ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಮಳೆಯಿಂದ ನಗರದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಶುಕ್ರವಾರ ಬೆಳಗ್ಗೆ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಂಗಳೂರು ಕಾಂಕ್ರಿಟ್ ಜಂಗಲ್ ಆಗಿ ರೂಪಾಂತರಗೊಂಡಿದ್ದು, ಮಳೆ ನೀರು ಸುನಾಯಾಸವಾಗಿ ಹರಿದು ಹೋಗುವುದು ಕಷ್ಟವಾಗಿದೆ.

ಈ ನಿಟ್ಟಿನಲ್ಲಿ ಬಿಬಿಎಂಪಿ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ನಗರದ ಎಲ್ಲ ವಲಯಗಳ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಿದ್ದಾರೆಂದು ಹೇಳಿದರು.

ಎಲ್ಲ ಭಾಗಗಳಲ್ಲೂ ನೀರು ತಗ್ಗು ಪ್ರದೇಶಗಳಿಗೆ ನುಗ್ಗದೇ ಕೆರೆಗಳತ್ತ ಹರಿದು ಹೋಗಬೇಕು, ರಸ್ತೆಗಳ ಆಜುಬಾಜಿನಲ್ಲೇ ಇಂಗುಗುಂಡಿಗಳನ್ನು ಮಾಡಬೇಕು, ಪ್ರತಿ ಮನೆಯಲ್ಲೂ ಈಗಾಗಲೇ ಮಳೆಕುಯ್ಲು ವ್ಯವಸ್ಥೆ ಇದೆ. ಅದು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ಆಗಸ್ಟ್ 27 ರಂದು, ಹವಾಮಾನ ಇಲಾಖೆಯು ಮುಂಬರುವ ವಾರದ ಆರಂಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಕೂಲ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಿತ್ತು. ಹವಾಮಾನ ಇಲಾಖೆ ಸೋಮವಾರ, ಮಂಗಳವಾರ ಮತ್ತು ಬುಧವಾರ ನಗರಕ್ಕೆ ಯೆಲ್ಲೋ ಅಲರ್ಟ್ ಮತ್ತು ಮುಂದಿನ ಎರಡು ದಿನಗಳವರೆಗೆ ಗ್ರೀನ್ ಅಲರ್ಟ್ ನೀಡಿದೆ.

ದೆಹಲಿಯ ಬಹುತೇಕ ಸ್ಥಳಗಳಲ್ಲಿ ಲೋಧಿ ರಸ್ತೆ, ಐಜಿಐ ವಿಮಾನ ನಿಲ್ದಾಣ, ಎನ್‍ಸಿಆರ್ ಗುರುಗ್ರಾಮ , ಮನೇಸರ್, ಫರೀದಾಬಾದ್, ನೋಯ್ಡಾ , ಗ್ರೇಟರ್ ನೋಯ್ಡಾ , ಇಂದಿರಾಪುರಂ, ಲೋನಿ ಡೆಹಾಟ್, ಹಿಂಡನ್ ಎಎಫ್, ಗಾಜಿಯಾಬಾದ್‍ನಲ್ಲಿ ಗುಡುಗು ಸಹಿತ ಭಾರಿ ಮಳೆ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್ ಮೈಕ್ರೋಬ್ಲಾಗಿಂಗ್ ವೇದಿಕೆಯಲ್ಲಿ ತಿಳಿಸಿದ್ದಾರೆ.

 ಎಲ್ಲೆಲ್ಲಿ ಮಳೆ

ಎಲ್ಲೆಲ್ಲಿ ಮಳೆ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 9ವರೆಗೂ ರಾಜ್ಯದ ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಹಲವೆಡೆ ಮಳೆ ಮುಂದುವರೆಯಲಿದೆ.

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್ ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ತೀರ ಪ್ರದೇಶದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಮೀ ಇರುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಕುಣಿಗಲ್, ಕೊಳ್ಳೇಗಾಲ, ಸುಳ್ಯ, ಮಾಗಡಿ, ನಾಗಮಂಗಲ, ಕೃಷ್ಣರಾಜಪೇಟೆ, ಭಾಗಮಂಡಲ, ಬೆಳ್ಳೂರು, ಬೆಂಗಳೂರು ನಗರ, ಗೋಪಾಲನಗರ, ಸಂತೆಬೆನ್ನೂರು, ಬ್ರಹ್ಮಾವರ, ಕನಕಪುರ, ಕುಶಾಲ್‌ನಗರ, ಆಗುಂಬೆ, ಉಡುಪಿ, ಸಿದ್ದಾಪುರ, ಮಂಕಿ, ಮಲವಳ್ಳಿ, ಸಾಲಿಗ್ರಾಮ, ಬೆಳ್ತಂಗಡಿ, ನರಗುಂದ, ಮುಳಬಾಗಿಲು, ಹೆಬ್ಬೂರು, ತಿಪಟೂರು, ಎಚ್‌ಡಿ ಕೋಟೆ, ತುರುವೇಕೆರೆ, ಪನ್ನಂಪೇಟೆಯಲ್ಲಿ ಮಳೆಯಾಗಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

    Nandi Hills Illegal Mining : ನಂದಿ ಬೆಟ್ಟದಲ್ಲಿ ಭೂ ಕುಸಿತಕ್ಕೆ ಅಕ್ರಮ ಸ್ಪೋಟಗಳೇ ಕಾರಣ? | Oneindia Kannada
     ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

    ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+