ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು, ಸೆಪ್ಟೆಂಬರ್ 28: ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅಧಿಕ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ತುಮಕೂರಿನಲ್ಲಿ ಒಣಹವೆ ಇರಲಿದೆ.

ಮುಂದಿನ 24 ಗಂಟೆಗಳಲ್ಲಿ, ಕರಾವಳಿಯ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಚತ್ತೀಸ್‌ಗಢದ ಕೆಲವು ಭಾಗಗಳು, ವಿದರ್ಭಾ, ಮರಾಠವಾಡ, ತೆಲಂಗಾಣ, ಮಧ್ಯಪ್ರದೇಶದ ಕೆಲವು ಭಾಗಗಳು, ಆಗ್ನೇಯ ರಾಜಸ್ಥಾನ ಮತ್ತು ಗುಜರಾತ್, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಲಾಬ್ ಚಂಡ ಮಾರುತದ ಪರಿಣಾಮ ಮಳೆಯಾಗುವ ನಿರೀಕ್ಷೆ ಇದ್ದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಲಕ್ಷದ್ವೀಪ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಸಹ ಮಳೆಯಾಗುವ ಸೂಚನೆಯಲ್ಲಿ ಹವಾಮಾನ ಇಲಾಖೆ ನೀಡಿದೆ.

ನೈಋತ್ಯ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 30ರ ವರೆಗೆ ಭಾರಿ ಮಳೆಗೆ ಕಾರಣವಾಗುತ್ತದೆ. ಆದರೆ ಈ ಬಾರಿ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು ಎಂದು ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿಯೂ ಮಳೆ ಸುರಿದ ಕಾರಣ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿತ್ತು. ಈಗ ಮುಂಗಾರು ಚುರುಕುಗೊಂಡಿದ್ದು, ಮಳೆಯ ಎಚ್ಚರಿಕೆ ಕೊಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿ ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದ್ದ ಗುಲಾಬ್ ಚಂಡಮಾರುತದ ಅಬ್ಬರ ಇದೀಗ ಕೊಂಚ ಕಡಿಮೆಯಾಗಿದ್ದು, ಚಂಡಮಾರುತವು ಪ್ರಸ್ತುತ ಪಶ್ಚಿಮ-ವಾಯುವ್ಯ ಭಾಗದತ್ತ ಮುಖ ಮಾಡಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾನುವಾರ ರಾತ್ರಿ ಒಡಿಶಾ-ಆಂಧ್ರಪ್ರದೇಶ ಗಡಿಭಾಗದಲ್ಲಿ ಗುಲಾಬ್ ಚಂಡಮಾರುತ ಅಪ್ಪಳಿಸಿತ್ತು. ಒಡಿಶಾದ ಗೋಪಾಲಪುರಂ ಮತ್ತು ಆಂಧ್ರಪ್ರದೇಶದ ಕಳಿಂಗಪಟ್ಟಣಂನಲ್ಲಿ ಚಂಡಮಾರುತವು ಭೂ ಪ್ರವೇಶ ಮಾಡಿತ್ತು.

ಚಂಡಮಾರುತದ ನೆಲಸ್ಪರ್ಶದ ನಂತರ ಎರಡೂ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರವಾಹದ ಸ್ಥಿತಿ ಎದುರಿಸುವ ಅಪಾಯವಿದ್ದ ಪ್ರದೇಶಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ನೆಲಸ್ಪರ್ಶದ ವೇಳೆ ಗಾಳಿಯ ವೇಗವು 95 ಕಿ.ಮೀ.ನಷ್ಟಿತ್ತು. ಮೂರೂ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಂಡಮಾರುತವು ಪ್ರಸ್ತುತ ಪಶ್ಚಿಮ-ವಾಯುವ್ಯ ಭಾಗದತ್ತ ಮುಖ ಮಾಡಿದ್ದು, ಬಳಿಕ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಚಂಡಮಾರುತದ ಅಬ್ಬರ ಕಡಿಮೆಯಾಗಲಿದೆ. ಅಂತೆಯೇ ಮುಂದಿನ 8ರಿಂದ 10 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ಪ್ರಭಾವವು ಕಡಿಮೆ ಇರಲಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ 20,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಆಂಧ್ರಪ್ರದೇಶದ 9 ಜಿಲ್ಲೆಗಳಲ್ಲಿ ಚಂಡಮಾರುತದ ಪ್ರಭಾವವು ತೀವ್ರವಾಗಿರಲಿದ್ದು, 85,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೂರ್ವ ಕರಾವಳಿ ರೈಲ್ವೆಯು 34 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಮಂಗಳೂರು, ಧರ್ಮಸ್ಥಳ, ಸುಬ್ರಹ್ಮಣ್ಯ, ತಿಡಗುಂಡಿ, ಶ್ರವಣಬೆಳಗೊಳ, ಕೆಜಿಎಫ್, ಬೀದರ್, ಕಾರ್ಕಳ, ಜಮಖಂಡಿ, ಮಳವಳ್ಳಿ, ಉಡುಪಿ, ಕೋಟಾ, ಮಾಣಿ, ಬಂಟ್ವಾಳ, ಬಿಳಿಗಿ, ಭೀಮರಾಯನಗುಡಿ, ಆಗುಂಬೆಯಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಎಲ್ಲೆಲ್ಲಿ ಮಳೆಯಾಗಲಿದೆ?

ಎಲ್ಲೆಲ್ಲಿ ಮಳೆಯಾಗಲಿದೆ?

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅಧಿಕ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ತುಮಕೂರಿನಲ್ಲಿ ಒಣಹವೆ ಇರಲಿದೆ.
 ಮುಂದಿನ 24 ಗಂಟೆ ಹೇಗಿರಲಿದೆ ರಾಜ್ಯದ ವಾತಾವರಣ

ಮುಂದಿನ 24 ಗಂಟೆ ಹೇಗಿರಲಿದೆ ರಾಜ್ಯದ ವಾತಾವರಣ

ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿಯ ಹಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

{document1}

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+