• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅ.17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 13: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 17ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ಮತ್ತು ಉಪನಗರಗಳಲ್ಲಿ ಅಧಿಕ ಮಳೆಯಾಗಿದ್ದು. ಈಗಾಗಲೇ 150 ಮಿಮೀ ಮಳೆ ದಾಖಲಿಸುವ ಮೂಲಕ ತಿಂಗಳ ಸಾಮಾನ್ಯ ಮಟ್ಟವನ್ನು ತಲುಪಿದೆ. ಇನ್ನು ಮುಂದಿನ ನಾಲ್ಕು ದಿನಗಳ ಕಾಲ ಮಿಂಚು ಹೆಚ್ಚಾಗಿರಲಿದ್ದು, ಚಂಡಮಾರುತದ ಚಟುವಟಿಕೆ ಇರುವುದರಿಂದ ಗಾಳಿ ಹೆಚ್ಚಿರುತ್ತದೆ.

ಕಳೆದ 24 ಗಂಟೆಗಳಲ್ಲಿ, ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ಗಂಗಾ ಪಶ್ಚಿಮ ಬಂಗಾಳದಲ್ಲಿ ಸಾಧಾರಣ ಮಳೆಯಾಗಿದೆ.ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶದ ಕರಾವಳಿ, ತಮಿಳುನಾಡಿನ ಉಳಿದ ಭಾಗಗಳು, ಕರ್ನಾಟಕ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ, ದಕ್ಷಿಣ ಗುಜರಾತ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಿದೆ. ಲಕ್ಷದ್ವೀಪ, ರಾಯಲಸೀಮ, ಪಶ್ಚಿಮ ಮಧ್ಯಪ್ರದೇಶ, ಈಶಾನ್ಯ ಭಾರತ ಮತ್ತು ಆಗ್ನೇಯ ರಾಜಸ್ಥಾನದಲ್ಲಿ ಲಘು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅ.16ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಅ.16ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ

ಕಳೆದ ಕೆಲ ದಿನಗಳಿಂದ ಮಲೆನಾಡಲ್ಲಿ ಉತ್ತಮ ಮಳೆಯಾದ ಪರಿಣಾಮ ತುಂಗಭದ್ರಾ ಜಲಾಶಯದಿಂದ 45 ಸಾವಿರ ಕ್ಯುಸೆಕ್‌ ನೀರು ಹೊರಗೆ ಬಿಡಲಾಗುತ್ತಿದೆ. ಇದರಿಂದ ಐತಿಹಾಸಿಕ ಹಂಪಿಯ ನದಿಪಾತ್ರದ ಪುರಂದರ ಮಂಟಪ ಸಂಪೂರ್ಣ ಮುಳಗಡೆಯಾಗಿದೆ. ಮಂಟಪದ ಗೋಪುರದ ತುದಿಯಲ್ಲಿರುವ ಕೇಸರಿ ಧ್ವಜ ಮಾತ್ರ ಗೋಚರಿಸುತ್ತಿದೆ.

ಚಕ್ರತೀರ್ಥ ಕೋದಂಡರಾಮಸ್ವಾಮಿ ದೇವಾಲಯದ ಬಳಿಯೂ ನೀರು ಹರಿದು ಬಂದಿದ್ದು, ವಿರೂಪಾಕ್ಷೇಶ್ವರ ದೇವಾಲಯದ ಬಳಿಯ ಸ್ನಾನಘಟ್ಟ, ವೈದಿಕ ಮಂಟಪವೂ ಜಲಾವೃತವಾಗಿವೆ. ಕೋಟಿಲಿಂಗ, ಲಕ್ಷ್ಮೀನರಸಿಂಹ, ಕೋಟಿಲಿಂಗಗಳೂ ಮುಳುಗಡೆಯಾಗಿವೆ. ನದಿ ತುಂಬಿ ಹರಿಯುತ್ತಿರುವುದರಿಂದ ಬೋಟ್‌ ಸಂಚಾರವೂ ಸ್ಥಗಿತಗೊಂಡಿದೆ.

ಮಂಡ್ಯ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದ್ದು, ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಮಂಡ್ಯ, ಭಾರತೀನಗರ, ಮದ್ದೂರು, ನಾಗಮಂಗಲ ತಾಲೂಕಿನಲ್ಲಿ ಕೆಲಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದರೆ, ಶ್ರೀರಂಗಪಟ್ಟಣದಲ್ಲಿ ಸಾಧಾರಣ ಮಳೆಯಾಗಿದೆ.

ಭಾರತೀನಗರದಲ್ಲಿ ಹನುಮಂತನಗರ ಸಮೀಪವಿರುವ ಹೆಬ್ಬಾಳ ಚನ್ನಯ್ಯನಾಲೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

 ಮಳೆಯಾಗಿರುವ ಜಿಲ್ಲೆಗಳು

ಮಳೆಯಾಗಿರುವ ಜಿಲ್ಲೆಗಳು

ಬುಕ್ಕಪಟ್ಟಣ, ನಿಪ್ಪಾಣಿ, ಅಣ್ಣಿಗೇರಿ, ಕೊಟ್ಟಿಗೆಹಾರ, ಹೊಸಕೋಟೆ, ಚನ್ನಗಿರಿ, ಪಾವಗಡ, ಮಾಣಿ, ಪಣಂಬೂರು, ಬೆಳ್ತಂಗಡಿ, ಶಿಡ್ಲಘಟ್ಟ, ಬ್ರಹ್ಮಾವರ, ಮಂಗಳೂರು, ಕೋಟ, ಸಿದ್ದಾಪುರ, ಭಾಗಮಂಡಲ, ಜಿಕೆವಿಕೆ, ಹಿರಿಯೂರು, ಗೌರಿಬಿದನೂರು, ಸಂಕೇಶ್ವರ, ಶಿರಾಲಿ, ವಿಟ್ಲ, ಹಾಸನ, ಮಳವಳ್ಳಿ, ಹೆಸರಘಟ್ಟ, ಸುಬ್ರಹ್ಮಣ್ಯ, ಧರ್ಮಸ್ಥಳ, ಗೋಕರ್ಣ, ನಾಪೊಕ್ಲು, ನೆಲಮಂಗಲ, ಮಾಗಡಿ, ಕನಕಪುರ, ಹುಕ್ಕೇರಿ, ರಾಣೆಬೆನ್ನೂರು, ಹೊಳೆಹೊನ್ನೂರು, ಪೆರಿಯಪಟ್ಟಣ, ಎಚ್‌ಎಎಲ್, ಅಜ್ಜಂಪುರ, ಕುಮಟಾ, ಬಾದಾಮಿ, ವಿರಾಜಪೇಟೆ, ಹಾರಂಗಿ, ಜಯಪುರ, ಬಂಡೀಪುರ, ಕೊಳ್ಳೇಗಾಲ, ಚಿಕ್ಕಮಗಳೂರು, ಉತ್ತರಹಳ್ಳಿ, ಉಚ್ಚಂಗಿದುರ್ಗ, ಚಿತ್ರದುರ್ಗ, ಚಿಂತಾಮಣಿಯಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಇಂದೂ ಕೂಡ ಮಳೆಯಾಗುವ ಸಾಧ್ಯತೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30. ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.
  2-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ:ಇದು ಎಷ್ಟು ಸೇಫ್ | Oneindia Kannada
   ಯಾವ ಪ್ರದೇಶದಲ್ಲಿ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ?

  ಯಾವ ಪ್ರದೇಶದಲ್ಲಿ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ?

  ಕಲಬುರಗಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೀದರ್‌ನಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  English summary
  Meteorological department predicted that Heavy Rainfall Will Occur In South Interior Karnataka And Yellow Alert Issued Till October 17.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X