ಅ.27 ರಂದು ರಾಜ್ಯದ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಅಕ್ಟೋಬರ್ 26: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 27 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.

ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರಿನಲ್ಲಿ ಒಣಹವೆ ಇರಲಿದೆ.

ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಗೆ ಜಿಲ್ಲಾ ಕೇಂದ್ರದ ಜನತೆಯನ್ನು ಅಕ್ಷರಶಃ ಪ್ರವಾಹ ಪರಿಸ್ಥಿತಿ ಸೃಷ್ಟಿಸಿದ್ದು ನಗರದ ಹೊರ ವಲಯದ ರಂಗಸ್ಥಳ ಸಮೀಪ ಇರುವ ರಂಗಧಾಮ ಕೆರೆ ಮಳೆಗೆ ತುಂಬಿ ಕೋಡಿ ಹರಿದ ಪರಿಣಾಮ ಮಳೆ ನೀರು ಉಕ್ಕಿ ಹರಿದು ನಾಲೆ, ರಾಜಕಾಲುವೆಗಳ ಒತ್ತುವರಿ ಕಾರಣಕ್ಕೆ ನಗರದ ಪ್ರತಿಷ್ಠಿತ ಡಿವೈಎನ್‌ ಸಿಟಿಗೆ ನುಗ್ಗಿ ಜನರ ನಿದ್ದೆಗೆಡಿಸಿದೆ.

ಇದೇ ಮೊದಲ ಬಾರಿಗೆ ಭಾರಿ ಮಳೆಗೆ ನಗರದ ಹೊರ ವಲಯದ ಗೌರಿಬಿದನೂರು ರಸ್ತೆಯಲ್ಲಿ ಬರೋಬ್ಬರಿ 1 ಕಿ.ಮೀನಷ್ಟುರಸ್ತೆಯೆ ಮಳೆಯಿಂದ ಜಲಾವೃತಗೊಂಡಿದ್ದು ವಾಹನ ಸವಾರರು ಹಾದಿಯಾಗಿ ಸಾರ್ವಜನಿಕರು ಸುತ್ತಮುತ್ತಲಿನ ಜನ ಗಂಟೆಗಟ್ಟಲೇ ಮಳೆಯಿಂದಾಗಿ ರಸ್ತೆಯಲ್ಲಿ ಸಂಚರಿಸಲಾಗದೇ ಗೌರಿಬಿದನೂರು ಸೇರಿದಂತೆ ಪೋಶೆಟ್ಟಿಹಳ್ಳಿ, ಮಂಚೇನಹಳ್ಳಿ ಕಡೆಗೆ ಸಂಚರಿಸಬೇಕಾಗಿದ್ದ ವಾಹನ ಸವಾರರು ಇನ್ನಿಲ್ಲದಂತೆ ಪರದಾಡಿದರು.

ರಾಜ್ಯಕ್ಕೆ ಅಕ್ಟೋಬರ್‌ 26ರಿಂದ ಈಶಾನ್ಯ ಮಾರುತಗಳು ಪ್ರವೇಶವಾಗಲಿದ್ದು, ಹಿಂಗಾರು ಮಳೆ ಸುರಿಯಲಿದೆ. ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಗೆ ಕಾರಣವಾಗಲಿವೆ.

ಕರಾವಳಿಯಲ್ಲಿ ಸಾಧಾರಣ ಮಳೆ ಸುರಿಸುತ್ತವೆ. ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಅಷ್ಟೊಂದು ಪ್ರಭಾವ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಅ.26ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆಯಾಗಲಿದ್ದು , ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ, ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯ ಕೆಲವು ಭಾಗದಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ಮುಂಗಾರು ಮಾರುತದ ಇರುವಿಕೆ ರಾಜ್ಯ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಅಗ್ರಹಾರ ಕೋಣಂದೂರು, ಭಾಗಮಂಡಲ, ಮೈಸೂರು, ಶ್ರೀರಂಗಪಟ್ಟಣ, ನಾಗನಹಳ್ಳಿ, ತಾಳಗುಪ್ಪ, ಹಾವೇರಿ, ಹುಂಚದಕಟ್ಟೆ, ಆಗುಂಬೆ, ಕೃಷ್ಣರಾಜಸಾಗರ, ಅಕ್ಕಿಆಲೂರು, ಹಾವೇರಿ, ರಾಮನಗರ, ಬೆಳ್ತಂಗಡಿ, ಕೊಟ್ಟೂರು, ಪೊನ್ನಂಪೇಟೆ, ಸಂಡೂರು, ಸುಬ್ರಹ್ಮಣ್ಯ, ಅಜ್ಜಂಪುರ, ಸಾಲಿಗ್ರಾಮ, ಸರಗೂರು, ಧಾರವಾಡ, ಯಲ್ಲಾಪುರ, ಬನವಾಸಿ, ಆನವಟ್ಟಿ, ಮಂಚಿಕೆರೆ, ಕಮ್ಮರಡಿ, ಗೇರುಸೊಪ್ಪ, ಸುಳ್ಯ, ಪುತ್ತೂರು, ವಿರಾಜಪೇಟೆ, ಶೃಂಗೇರಿ, ಜಯಪುರ, ಹಗರಿಬೊಮ್ಮನಹಳ್ಳಿ, ಮಸ್ಕಿ, ಸವಣೂರು, ಕುಂದಗೋಳ, ಲಕ್ಷ್ಮೇಶ್ವರ, ತುಮರಿ, ತ್ಯಾಗರ್ತಿ, ನಾಪೊಕ್ಲು, ಕೂಡ್ಲಿಗಿ, ಶ್ರೀಮಂಗಲ, ಕುಶಾಲನಗರ, ಕೋಲಾರ, ಹೊಸದುರ್ಗದಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ.

ಎಚ್‌ಎಎಲ್‌ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 48 ಗಂಟೆಗಳಲ್ಲಿ ರಾಜ್ಯ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರಿನಲ್ಲಿ ಒಣಹವೆ ಇರಲಿದೆ.
 ಅತಿ ಹೆಚ್ಚು ಉಷ್ಣಾಂಶ

ಅತಿ ಹೆಚ್ಚು ಉಷ್ಣಾಂಶ

ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್‌ನಲ್ಲಿ 13.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+