ರಾಜ್ಯದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಎರಡು ದಿನ ಮಳೆ
ಬೆಂಗಳೂರು, ಜನವರಿ 01: ರಾಜ್ಯದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
2022 ಹೊಸ ವರ್ಷ ಆರಂಭಕ್ಕೆ ಮಳೆ ಸ್ವಾಗತ ಕೋರಿದೆ. ರಾಜ್ಯದ ಹಲವೆಡೆ ಜ.1 ಮತ್ತು 2ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗಲಿದೆ.
ಐಎಂಡಿ ಬಿಡುಗಡೆ ಮಾಡಿರುವ ವರದಿ ಪ್ರಕಾರ, ತಮಿಳುನಾಡು, ಪುದುಚೆರಿ ಮತ್ತು ಕಾರೈಕಲ್‌ನಲ್ಲಿ ಮುಂದಿನ ಐದು ದಿನಗಳ ಕಾಲ ಬಿರುಸಾದ ಗಾಳಿ ಚಲನೆ ವಾತಾವರಣ ಇರಲಿದೆ. ಹೀಗಾಗಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ತಮಿಳುನಾಡಿನ ಒಳನಾಡಿನ ಭಾಗಗಳಲ್ಲಿ ಕೂಡ ಗುಡುಗು ಸಹಿತ ಮಳೆ ಉಂಟಾಗಬಹುದು. ಉಳಿದಂತೆ ಈ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಇತರ ಕಡೆ ಒಣ ಹವೆ ಮುಂದುವರಿಯಲಿದೆ ಎಂದು ಅದು ತಿಳಿಸಿದೆ.
ಪಶ್ಚಿಮ ಘಟ್ಟಗಳು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ದಟ್ಟ ಮಂಜು ಅಥವಾ ಇಬ್ಬನಿ ಬೀಳಬಹುದು. ಚೆನ್ನೈನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಹೀಗಾಗಿ ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಬಹುದು. ಚೆನ್ನೈನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಮಳೆ ಇಲ್ಲ
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಇಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಇನ್ನು ಶುಕ್ರವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು.

ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆ
ಮೋಡ ಕವಿದ ವಾತಾವರಣ ಜತೆಗೆ ಮೇಲ್ಮೈ ಸುಳಿಗಾಳಿ ಹಾಗೂ ನೆರೆಯ ತಮಿಳುನಾಡಿನಲ್ಲಿ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆಯಾಗಲಿದೆ. ತಮಿಳುನಾಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದರು.

ನವೆಂಬರ್‌ನಲ್ಲಿ ಮಳೆಯಾಗಿತ್ತು
ರಾಜ್ಯದಲ್ಲಿ ನವೆಂಬರ್‌ನಲ್ಲಿ ಮಳೆರಾಯ ಅಬ್ಬರಿಸಿದ್ದ. ಇದರಿಂದ ರೈತರು ಬೆಳೆ ಬೆಳೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ರೈತರು ಇನ್ನು ಸಹ ಆ ಹಾನಿಯಿಂದ ಹೊರಬಂದಿಲ್ಲ. ಎಲ್ಲಾ ಬೆಳೆಯೂ ನೆಲಕಚ್ಚಿತ್ತು.

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ. 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 25.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.











Click it and Unblock the Notifications