ಮುಂದಿನ 3 ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ಬೆಂಗಳೂರು, ಅಕ್ಟೋಬರ್ 30: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯದಲ್ಲಿ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಆರಂಭವಾಗಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದರೂ, ರೈತರಿಗೆ ಮಾತ್ರ ಲಾಭಕ್ಕಿಂತ ಹಾನಿಯೇ ಹೆಚ್ಚು.

ರಾಜ್ಯದಲ್ಲಿ ಸತತ ಮೂರು ವರ್ಷಗಳಿಂದ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದೆ. ಈ ವರ್ಷ ಅಕ್ಟೋಬರ್ 28ರವರೆಗೆ ವಾಡಿಕೆಯ ಪ್ರಕಾರ, 1081 ಮಿ. ಮೀ. ಮಳೆಯಾಗಬೇಕಿತ್ತು. ಆದರೆ, 1158 ಮಿ. ಮೀ. ಮಳೆಯಾಗಿದೆ.

ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ ವಾರ್ಷಿಕ ಮಳೆ ಗುರಿ ತಲುಪಲಾಗಿದೆ. ಕಳೆದ ನಾಲ್ಕು ದಶಕದಲ್ಲಿ 1975ರಲ್ಲಿ ವಾಡಿಕೆ ಶೇ.31ರಷ್ಟು ಅಧಿಕ ಮಳೆಯಾದರೆ, 2016 ವಾಡಿಕೆಗಿಂತ ಶೇ. 28ರಷ್ಟು ಮಳೆಯ ಪ್ರಮಾಣ ಕಡಿಮೆಯಾಗಿದೆ.

ಕೇರಳದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದ್ದು, ಕಣ್ಣೂರು, ಕಾಸರಗೋಡು, ಅಲಪ್ಪುಳ, ತಿರುವನಂತಪುರಂ, ಕೊಲ್ಲಂ ಸೇರಿದಂತೆ 11 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಒಡಿಶಾ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗಲಿದೆ.

ರಾಜ್ಯಾದ್ಯಂತ ಜೂನ್‌ ಮತ್ತು ಜುಲೈನಲ್ಲಿ ಉತ್ತಮವಾಗಿ ಮಳೆ ಸುರಿದ ಪರಿಣಾಮ ಬಿತ್ತನೆ ಸಮೃದ್ಧವಾಗಿತ್ತು. ಆದರೆ, ಆಗಸ್ಟ್‌ ಮತ್ತು ಸೆಪ್ಟೆಂಬರ್‌ ತಿಂಗಳು ಮಳೆ ಕೈಕೊಟ್ಟಿತು. ಅಕ್ಟೋಬರ್‌ನಲ್ಲಿ ಪುನಃ ಮಳೆ ಚುರುಕಾಯಿತು.

ಈ ರೀತಿಯ ಮಳೆಯ ಜೂಜಾಟದಲ್ಲಿ ಫಸಲಿಗೆ ಬಂದ ಬೆಳೆ ಕೈಗೆ ಸಿಗದೆ ರೈತ ಕಂಗಾಲಾಗಿದ್ದಾನೆ. ಕೋಲಾರ, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಕಲಬುರಗಿ, ಯಾದಗಿರಿ, ಬೀದರ್‌ ಜಿಲ್ಲೆಗಳ ಕೆಲವು ಕಡೆ ಬಿತ್ತನೆ ಸಮಯದಲ್ಲಿ ಮಳೆ ಬೀಳಲಿಲ್ಲ. ಬಿತ್ತನೆಯ ನಂತರ ಸುರಿದ ಭಾರಿ ಮಳೆಯಿಂದ ಬೆಳೆ ಹಾನಿಯಾಗಿದೆ.

ಈಶಾನ್ಯ ಮಾನ್ಸೂನ್ ಹಿನ್ನೆಲೆಯಲ್ಲಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಇಂದಿನಿಂದ ದಕ್ಷಿಣ ಭಾರತದ ಪೂರ್ವ ಕರಾವಳಿಯಾದ್ಯಂತ ಮಳೆಯಾಗುತ್ತದೆ.

ಈ ವಾರಾಂತ್ಯದಲ್ಲಿ ಮಳೆಯು ದಕ್ಷಿಣ ಭಾರತದ ಒಳಭಾಗಕ್ಕೆ ಪ್ರವೇಶಿಸಲಿದೆ. ಒಟ್ಟು ಮಳೆಯ ಪ್ರಮಾಣವು 50-80 ಮಿಮೀ ಇರುತ್ತದೆ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಸ್ಥಳೀಯವಾಗಿ 150 ಮಿಮೀ ಇರುತ್ತದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ. 30 ಮತ್ತು 31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ ಅ. 31ರವರೆಗೆ ಮಳೆ ಹೆಚ್ಚಾಗಲಿದೆ.

ಕರ್ನಾಟಕದಲ್ಲಿ ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಮಳೆ ಹೆಚ್ಚಾಗಲಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

 ಎಲ್ಲೆಲ್ಲಿ ಮಳೆಯಾಗಲಿದೆ?

ಎಲ್ಲೆಲ್ಲಿ ಮಳೆಯಾಗಲಿದೆ?

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದೆ.
 ಗರಿಷ್ಠ ಉಷ್ಣಾಂಶ

ಗರಿಷ್ಠ ಉಷ್ಣಾಂಶ

ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ರಾಯಚೂರಿನಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+