ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.27ರವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 23: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 27ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲಿಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಗರದಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ. ಪರಿಣಾಮ ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ.

ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಮಳೆ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ 4-5 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ವಾತಾವರಣದ ಆಧಾರದ ಮೇಲೆ ಈಗಾಗಲೇ ಜಿಲ್ಲೆಗಳಲ್ಲಿ ಯಲ್ಲೋ ಹಾಗೂ ರೆಡ್ ಅಲರ್ಟ್ ಗಳನ್ನು ಘೋಷಣೆ ಮಾಡಲಾಗಿದೆ. ಎಲ್ಲಾ ಜಿಲ್ಲಾ ಆಯುಕ್ತರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಪರಿಸ್ಥಿತಿ ಎದುರಿಸಲು ಜಿಲ್ಲಾ ಆಡಳಿತ ಮಂಡಳಿ ಸಿದ್ಧವಿದೆ. ಕಳೆದ ಎರಡು ದಿನಗಳಿಂದ ಎದುರಾಗಿರುವ ಮಳೆ ಸಂಬಂಧಿದ ಹಾನಿ ಕೂರಿತು ಮೈಸೂರು ಉಪ ಆಯುಕ್ತರಿಂದ ವರದಿ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿರುವ ರಾಜ್ಯದ ಜನರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ಅಲ್ಲಿನ ಸರ್ಕಾರ ಕೂಡ ಅವರಿಗೆ ಸಹಕಾರ ನೀಡುತ್ತಿದೆ. ಈ ವರೆಗು 10 ಕುಟುಂಬಗಳ 96 ಮಂದಿಯರನ್ನು ಗುರ್ತಿಸಲಾಗಿದ್ದು, ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಅವರ ಸುರಕ್ಷತೆ ಹಾಗೂ ಸುರಕ್ಷಿತದಿಂದ ರಾಜ್ಯಕ್ಕೆ ಕರೆ ತರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಚನ್ನಗಿರಿ, ಕೊಟ್ಟಿಗೆಹಾರ, ಹಿರೆಕೆರೂರು, ಸಕಲೇಶಪುರ, ತೀರ್ಥಹಳ್ಳಿ, ಶಿರಾಳಕೊಪ್ಪ, ನಾಗಮಂಗಲ, ಸಿದ್ದಾಪುರ, ಜಾನ್ಮನೆ, ಕುಂದಾಪುರ, ಅಜ್ಜಂಪುರ, ಗುಬ್ಬಿ, ತ್ಯಾಗರ್ತಿ, ಹೊಸದುರ್ಗ, ಮಾಣಿ, ವಿಟ್ಲ, ಹೊಳೆನರಸೀಪುರ, ಶ್ರವಣಬೆಳಗೊಳ, ಪುತ್ತೂರು, ತಿಪಟೂರು, ಗೇರುಸೊಪ್ಪ, ಕೊಲ್ಲೂರು, ಹೊಳೆ ಹೊನ್ನೂರು, ಹಾಸನ, ಸಂತೆಬೆನ್ನೂರು, ಕುಮಟಾ, ಜಯಪುರ, ಕೊಪ್ಪ, ತುಮಕೂರು, ಮಧುಗಿರಿ, ಚಿತ್ರದುರ್ಗ, ಕಾರವಾರ, ಸುಬ್ರಹ್ಮಣ್ಯ, ಬೆಳ್ತಂಗಡಿ, ಸಾಗರ, ತಾಳಗುಪ್ಪ, ಸೊರಬ, ಭದ್ರಾವತಿ, ಕಮ್ಮರಡಿ, ಕಡೂರು, ಶ್ರೀಮಂಗಲ, ಭಾಗಮಂಡಲ, ಉಚ್ಚಂಗಿದುರ್ಗ, ಗೌರಿಬಿದನೂರು, ಕೋಲಾರದಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಟಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲಿಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್‌ನಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

ಹವಾಮಾನ ಸುದ್ದಿ ನೋಡ್ಬೇಕು ಅಂತಾ ಕೂತ್ರೆ Tvಯಲ್ಲಿ ಬಂದಿದ್ದು ಅಶ್ಲೀಲ ದೃಶ್ಯ | Oneindia Kannada

English summary
Meteorological Department Predicted that, Heavy Rainfall Will Occur In South Interior Karnataka Till October 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X