ಅಕ್ಟೋಬರ್ 25ರವರೆಗೂ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಅಕ್ಟೋಬರ್ 21: ರಾಜ್ಯದಲ್ಲಿ ಅಕ್ಟೋಬರ್ 25ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಮಳೆ ತುಸು ಕಡಿಮೆಯಾಗಿದ್ದರೂ, ಮುಂದಿನ ದಿನಗಳಲ್ಲಿ ಅಬ್ಬರ ಮತ್ತೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಅ.21, 22 ಮತ್ತು 24ರಂದು ರಾಜಧಾನಿಗೆ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್‌ ನೀಡಿದೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಅ. 21ರಿಂದ ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ಕೇರಳ, ಪಶ್ಚಿಮ ಬಂಗಾಳ, ಉತ್ತರಾಖಂಡದಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿದೆ. ಉತ್ತರಾಖಂಡದಲ್ಲಿ ಮಳೆಯಿಂದ 35 ಜನರು ಸಾವನ್ನಪ್ಪಿದ್ದು, ಕೇರಳದಲ್ಲೂ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದಲ್ಲಿ ಭೂಕುಸಿತ ಮುಂದುವರೆದಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಪಶ್ಚಿಮ ಬಂಗಾಳ, ಜಾರ್ಖಂಡ್ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಇಂದು ಕೂಡ ವಿಪರೀತ ಮಳೆಯಾಗಲಿದ್ದು, ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಿಂದ ಕೇರಳದ 11 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಪಟ್ಟಣಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಲಕ್ಕಾಡ್, ಮಣಪ್ಪುರಂ, ಕೋಳಿಕ್ಕೋಡ್, ವಯನಾಡ್, ಕಣ್ಣೂರು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ. 21ರಂದು ಕಾಸರಗೋರು ಮತ್ತು ಕಣ್ಣೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ

ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ

ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ಏರ್‌ಪೋರ್ಟ್‌ನಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಮುಂದಿನ ನಾಲ್ಕು ದಿನ ಮಳೆ

ಮುಂದಿನ ನಾಲ್ಕು ದಿನ ಮಳೆ

ಹವಾಮಾನ ವೈಪರೀತ್ಯದಿಂದ ರಾಜ್ಯದ ಹಲವೆಡೆ ಇನ್ನೂ ಕೆಲವು ದಿನಗಳ ಕಾಲ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅ.26 ರಂದು ರಾಜ್ಯದಿಂದ ಮುಂಗಾರು ನಿರ್ಗಮಿಸಲಿದ್ದು, ಹಿಂಗಾರು ಮಾರುತಗಳು ಕಾಲಿಡಲಿವೆ. ಈ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ತುಸು ಏರಿಕೆಯಾಗಲಿದೆ.
 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+