ರಾಜ್ಯದಲ್ಲಿ ಮುಗಿದಿಲ್ಲ ಮಳೆಯ ಅಬ್ಬರ, ಆಗಸ್ಟ್ 15ರವರೆಗೂ ಭಾರಿ ಮಳೆ ನಿರೀಕ್ಷೆ

ಬೆಂಗಳೂರು, ಆಗಸ್ಟ್ 11: ರಾಜ್ಯದಲ್ಲಿ ಇನ್ನೂ ಮಳೆಯ ಅಬ್ಬರ ಮುಗಿದಿಲ್ಲ, ಆಗಸ್ಟ್ 15ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಕೊಂಚ ಬಿಡುವು ಪಡೆದಿದ್ದ ಮಳೆ ಮತ್ತೆ ಚುರುಕಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲೂ ಮಳೆಯಾಗಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆ.12ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ಅವಧಿಯಲ್ಲಿಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು.

ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ನಷ್ಟ ಉಂಟಾಗಿದೆ.

ಕೇವಲ ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಉತ್ತರ ಭಾರತದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿ ಸಂಭವಿಸಿದ್ದು, ಹಲವೆಡೆ ಡ್ಯಾಂಗಳ ಗೇಟ್ ತೆರೆದಿದ್ದರಿಂದ ಮಾಡಿದ್ದರಿಂದ ಅನೇಕ ಗ್ರಾಮಗಳೇ ಮುಳುಗಡೆಯಾಗಿವೆ.

 ಎಲ್ಲೆಲ್ಲಿ ಹೆಚ್ಚಿನ ಮಳೆ

ಎಲ್ಲೆಲ್ಲಿ ಹೆಚ್ಚಿನ ಮಳೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

 ಮೀನುಗಾರರಿಗೆ ಎಚ್ಚರಿಕೆ

ಮೀನುಗಾರರಿಗೆ ಎಚ್ಚರಿಕೆ

ಆಗಸ್ಟ್‌ 12ರವರೆಗೆ ಕರಾವಳಿ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಅವಧಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇಲ್ಲ. ಆಗ್ನೇಯ ಅರಬ್ಬಿ ಸಮುದ್ರ, ಕೇರಳ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

 ಎಲ್ಲೆಲ್ಲಿ ಹೆಚ್ಚು ಮಳೆ

ಎಲ್ಲೆಲ್ಲಿ ಹೆಚ್ಚು ಮಳೆ

ಚಿಂತಾಮಣಿಯಲ್ಲಿ 11 ಸೆಂ.ಮೀ ಮಳೆಯಾಗಿದೆ, ರಾಯಲ್‌ಪಾಡುವಿನಲ್ಲಿ 8 ಸೆಂ.ಮೀ ಮಳೆಯಾಗಿದೆ. ಕೋಲಾರ, ಸಿದ್ದಾಪುರ, ಶಿಡ್ಲಘಟ್ಟ, ಥೊಂಡೆಭಾವಿ, ಸುಬ್ರಹ್ಮಣ್ಯ, ಆಗುಂಬೆ, ಮೂರ್ನಾಡು, ಜಮಖಂಡಿ, ಕೋಟಾ, ಕೊಲ್ಲೂರು, ಧರ್ಮಸ್ಥಳ, ಕದ್ರ, ಸುಂಟಿಕೊಪ್ಪ, ಕುಷ್ಟಗಿ, ಮಂಗಳೂರಿನಲ್ಲಿ ಮಳೆಯಾಗಿದೆ.

Recommended Video

    ಹಿಂದೂ ದೇಗುಲ ಧ್ವಂಸ ಮಾಡಿದ್ದು ಪಾಕಿಸ್ತಾನಕ್ಕೆ ನಾಚಿಕೆಗೇಡೆಂದು ಒಪ್ಪಿಕೊಂಡ ಪಾಕ್ | Oneindia Kannada
     ಬೆಂಗಳೂರಿನಲ್ಲಿ ಮಳೆಯಾಗಲಿದೆಯೇ?

    ಬೆಂಗಳೂರಿನಲ್ಲಿ ಮಳೆಯಾಗಲಿದೆಯೇ?

    ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಎಚ್‌ಎಎಲ್‌ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+