ಆಗಸ್ಟ್ 18ರವರೆಗೂ ರಾಜ್ಯದಲ್ಲಿ ಮುಂದುವರೆಯಲಿದೆ ಬಿರುಸಿನ ಮಳೆ
ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಆಗಸ್ಟ್ 18ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Recommended Video
ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆ ಇದೆ.
ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಳೆಯಿಂದ ಸಾವಿರಾರು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ
ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.

ಉತ್ತರ ಒಳನಾಡಿನಲ್ಲಿ ಮಳೆಯ ನಿರೀಕ್ಷೆ
ಬೆಳಗಾವಿ, ಬೀದರ್, ಧಾರವಾಡ, ಗಸಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರಲ್ಲಿ ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ತಾಳಿಕೋಟೆ, ಕೋಟಾ, ಶಿರಾಲಿ, ಹೊನ್ನಾವರ, ಕದ್ರ, ಕುಷ್ಟಗಿ, ತುಮ್ರಿ, ಸರಗೂರು, ಬಸವನ ಬಾಗೇವಾಡಿ, ಸವನೂರು, ಪಣಂಬೂರು, ಕೊಪ್ಪಳ, ಮುರಗೋಡ, ಬೈಲಹೊಂಗಲ, ಪುತ್ತೂರು, ಕೂಡ್ಲಿಗಿ, ಆಗುಂಬೆ, ಚನ್ನಪಟ್ಟಣ, ಮಂಕಿ, ಹಳಿಯಾಳ, ಯಲ್ಲಾಪುರ, ಶಿಗ್ಗಾಂವ್, ತಿಪಟೂರು, ತ್ಯಾಗರ್ತಿ, ಭದ್ರಾವತಿ, ಬಾದಾಮಿ, ಕೋಣಂದೂರು, ಮಾಗಡಿ, ಮದ್ದೂರು, ಹೊಸಪೇಟೆ, ಜಯಪುರ, ಹೊಸದುರ್ಗ, ಭಾಗಮಂಡಲದಲ್ಲಿ ಮಳೆಯಾಗಿದೆ.

ಹೊಸ ಪೇಟೆಯಲ್ಲಿ ಅಧಿಕ ಮಳೆ
ಹೊಸಪೇಟೆ ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶುಕ್ರವಾರ ಬಿರುಸಿನ ಮಳೆಯಾಗಿದೆ. ಮಧ್ಯಾಹ್ನ ಮೂರೂವರೆಯಿಂದ ಆರಂಭವಾದ ಮಳೆ ಸಂಜೆ 5.30ರವರೆಗೂ ಸುರಿದಿದೆ, ಬೆಳಗ್ಗೆಯಿಂದಲ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ವಾಹನ ಸವಾರರು ಪರದಾಟ ನಡೆಸಿದರು. ನೀರಿನ ಪ್ರಮಾಣ ತಗ್ಗುವವರೆಗೆ ವಾಹನ ಸಂಚಾರಕ್ಕೆ ತೊಡಕಾಗಿದೆ. ತಾಲೂಕಿನ ನಾಗೇನಹಳ್ಳಿ, ಹೊಸೂರು, ಧರ್ಮದ ಗುಡ್ಡ ಸೇರಿದಂತೆ ಹಲವೆಡೆ ಮಳೆಯ ವರದಿಯಾಗಿದೆ.












Click it and Unblock the Notifications