Karnataka Rains: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ರಣಭೀಕರ ಮಳೆ: ಆರೆಂಜ್‌ & ಯೆಲ್ಲೋ ಅಲರ್ಟ್ ಐಎಂಡಿ!

Karnataka Rain Alert: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲ ಝಳವಿತ್ತು. ಗುರುವಾರ ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ತಂಪಾದ ವಾತಾವರಣ ನಿರ್ಮಾಣವಾಗಿದೆ. ಇಂದಿನಿಂದ (ಮೇ 2ರಿಂದ) ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಹಲವು ಜಿಲ್ಲೆಗಳಲ್ಲಿ ಜೋರು ಮಳೆ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್ ಸಹ ನೀಡಲಾಗಿದೆ. ಯಾವ ಜಿಲ್ಲೆಯಲ್ಲಿ, ಯಾವ ದಿನ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆಯಾಗುತ್ತಿದೆ. ದೇಶದಾದ್ಯಂತ ಕಳೆದ ಒಂದು ತಿಂಗಳಿನಿಂದ ಬಿಸಿಲ ಝಳ ತೀವ್ರವಾಗಿತ್ತು. ಇದೀಗ ಬಿಸಿಲ ಝಳ ತುಸು ಇಳಿಕೆಯಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಇಂದಿನಿಂದ ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Heavy Rains 4 Days in Karnataka Including Bengaluru IMD Issues Orange and Yellow Alert

ಮೇ 02: ಇಂದು ಬೆಂಗಳೂರು ಸೇರಿ ವಿವಿಧೆಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಇರಲಿದೆ. ಕೊಡಗು, ಮೈಸೂರು, ತುಮಕೂರು, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಭಾರೀ ಮಳೆಯಾಗಲಿದೆ. ಮುಂದುವರಿದು ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಹಾಗೂ ವಿಜಯನಗರದಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ವಿವಿಧ ಭಾಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಗಾಳಿಯ ವೇಗವು 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಆದರೆ ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮೇ 03: ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮಳೆಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಉಡುಪಿ & ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

Heavy Rains 4 Days in Karnataka Including Bengaluru IMD Issues Orange and Yellow Alert

ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಆರೆಂಜ್‌ & ಯೆಲ್ಲೋ ಅಲರ್ಟ್!

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೇ 4ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಐಎಂಡಿಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ದಕ್ಷಿಣ ಒಳನಾಡಿನ ಹಾಗೂ ಮಲೆನಾಡಿನಲ್ಲೂ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು,ಚಾಮರಾಜನಗರ ಹಾಗೂ ಚಿತ್ರದುರ್ಗ. ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಹಾಗೂ ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಹೀಗಾಗಿ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮೇ 7ರ ವರೆಗೆ ಮಳೆ!

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೇ 4ರ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯದಲ್ಲಿ ಬಿಸಿಲ ಝಳ ಇಳಿಕೆಯಾಗಲಿದ್ದು ತಂಪಾದ ವಾತಾವರಣ ಇರಲಿದೆ. ಚಂಡಮಾರುತ ಪ್ರಭಾವ ಹಾಗೂ ಪೂರ್ವ ಮುಂಗಾರು ಈ ಬಾರಿ ಕರ್ನಾಟಕಕ್ಕೆ ಬಂಪರ್ ತಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+