ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಮೇ 12: ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ 6 ಸೆಂ.ಮೀ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ 5 ಸೆಂ.ಮೀನಷ್ಟು ಮಳೆಯಾಗಿದೆ. ಶಿವಮೊಗ್ಗದ ಹುಂಚದಕಟ್ಟೆ, ಬೆಳಗಾವಿಯ ಅಥಣಿಯಲ್ಲಿ 5 ಸೆಂ.ಮೀ ಮಳೆಯಾಗಿದೆ.

ಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆ ಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆ

ಅರಸಾಳು, ತ್ಯಾಗರ್ತಿ, ಯಲಬುರ್ಗಾ,ನರಗುಂದ, ಕಿರವತ್ತಿ, ಯಲ್ಲಾಪುರದಲ್ಲಿ 3 ಸೆಂ.ಮೀ ಮಳೆಯಾಗಿದೆ. ಬಂಟ್ವಾಳ, ಹಿರೇಕೆರೂರು, ಮುದ್ಗಲ್, ಕೊಟ್ಟಿಗಹಾರ, ಹರಪನಹಳ್ಳಿ, ಆನವಟ್ಟಿಯಲ್ಲಿ ತಲಾ 2 ಸೆಂ.ಮೀ, ಸಿದ್ದಾಪುರ, ಕಾರವಾರ, ಮುಂಡಗೋಡು, ಮಹಾಲಿಂಗಾಪುರ, ಬಾದಾಮಿ, ಕಲ್ಘಟಗಿ, ಕುಷ್ಟಗಿ, ಬೈಲಹೊಂಗಲ, ಕಳಸ, ಸಾಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

Heavy Rains Accompanied By Thunderstorms In Shivamogga And Dakshina Kannada

ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ರಾಯಚೂರಿನಲ್ಲಿ ಅತಿ ಹೆಚ್ಚು ಅಂದರೆ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದೆ. ಆದರೆ ನಿನ್ನೆಗಿಂತ 2 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆಯಾಗಿದೆ.

ಮುಂದಿನ 48 ಗಂಟೆಗಳಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ 35.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Heavy Rains Accompanied By Thunderstorms In Shivamogga And Dakshina Kannada.Rainfall occurred at many places over Coastal Karnataka and North Interior Karnataka and at a few places over South Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X