ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು,
ಡಿಸೆಂಬರ್ 3: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. id="toptextpromo"> id='are-slot-1' class='oiad oi-axt oiadv'>ಮಂಗಳೂರು,
ಸೂರತ್ಕಲ್, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ಸೇರಿದಂತೆ ದಕ್ಷಿಣ ಕನ್ನಡದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು, ಕಳಸ, ಶಿವಮೊಗ್ಗ, ಉತ್ತರ ಕನ್ನಡದಲ್ಲೂ ಮಳೆಯಾಗಿದೆ. id='are-slot-2' class='oiad oi-axt oiadv'>
ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಆತಂಕ
ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಅರೇಬಿಕಾ ಕಾಫಿ ಹಣ್ಣಾಗಿದ್ದು ಮಳೆಯಿಂದ ಉದುರುವ ಆತಂಕ ಎದುರಾಗಿದೆ. ಮೈಸೂರು ನಗರದಲ್ಲಿ ಸಂಜೆಯಿಂದ ಅಲ್ಲಲ್ಲಿ ಸಾಧಾರಣ ಮಳೆ ಸುರಿದಿದೆ. ಮಂಡ್ಯ, ಹಾಸನದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು.

ತಮಿಳುನಾಡಿನಲ್ಲಿ ಪ್ರವಾಹ ಭೀತಿ
ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಂಕರಭರಣಿ ನದಿ ದಡದ ಊರುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಕೆಲವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಭಾಗದಲ್ಲಿ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ನಗರದಲ್ಲಿ ಗರಿಷ್ಠ 24.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.4 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 24.8 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 25.2 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕದ ಎಲ್ಲೆಲ್ಲಿ ಮಳೆ?
ರಾಜ್ಯದ ವಿವಿಧ ಭಾಗಗಳಲ್ಲಿ ಚಿಕ್ಕ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಹಾವೇರಿ, ಕೊಡಗು ಸೇರಿ ವಿವಿಧ ಭಾಗಗಳಲ್ಲಿ ಚಿಕ್ಕ ಪ್ರಮಾಣದಲ್ಲಿ ಮಳೆ ಆಗಲಿದೆ.












Click it and Unblock the Notifications