ಭಾರೀ ಮಳೆ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಜುಲೈ 16ರಂದು ರಜೆ ಘೋಷಣೆ

Karnataka Rains: ಮುಂಗಾರು ಮಳೆ ಚುರುಕು ಪಡೆದ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀತಿ ತುಂಬಿ ಹರಿಯುತ್ತಿವೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೆ, ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಹಾಗಾದರೆ ಎಲ್ಲೆಲ್ಲಿ ಭಾರೀ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಣಟ ಮುಂದುವರೆದಿದೆ. ಇನ್ನು ಮಕ್ಕಳ ಹಿತದೃಷ್ಟಿಯಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ಜುಲೈ 16ರವರೆಗೂ ರಜೆ ವಿಸ್ತರಣೆ ಮಾಡಲಾಗಿದೆ.

Heavy rains Holiday declared on July 16 for schools colleges and Anganwadis in these districts

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆ ಮಂಗಳವಾರ (ಜುಲೈ 16 ) ಅಂಗನವಾಡಿ, ಶಾಲಾ- ಕಾಲೇಜುಗಳಿಗೆ(ಪದವಿ ಕಾಲೇಜು ಹೊರತುಪಡಿಸಿ)ರಜೆ ವಿಸ್ತರಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ‌ ಹೊರಡಿಸಿದ್ದಾರೆ.

ಮುಂದಿನ ಮೂರು ದಿನಗಳ ಕಾಲ ಅಂದರೆ ಜುಲೈ 17ರವೆಗೆ ಭಾರೀ ಮಳೆ ಮುಂದುವರೆಯುವ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೆ ಜುಲೈ 16ರಂದು ಹಳಿಯಾಳ ಮತ್ತು ಮುಂಡಗೋಡ ಹೊರತುಪಡಿಸಿ ಉಳಿದ 10 ತಾಲ್ಲೂಕುಗಳ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇನ್ನು ಮಲೆನಾಡಲ್ಲಿ ಮಳೆರಾಯನ ಆರ್ಭಟ ಮುಂದುವರೆದಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕುಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ತಹಶಿಲ್ದಾರ್‌ಗಳು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ 6 ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+