Heavy Rain: ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ & ಆರೆಂಜ್ ಅಲರ್ಟ್, ಐಎಂಡಿ ರಿಪೋರ್ಟ್
Karnataka Rains: ವಾಯುಭಾರ ಕುಸಿತ ಹಾಗೂ ಮುಂಗಾರು ಪೂರ್ವ ಮಳೆ ಚುರುಕು ಪಡೆದುಕೊಂಡಿದ್ದು. ಬೆಂಗಳೂರು ಸೇರಿದಂತೆ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೊಂದು ವಾರ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಕೊಡಲಾಗಿದೆ. ರಾಜ್ಯದ ಯಾವ ಭಾಗದಲ್ಲಿ ಯಾವ ದಿನ ಮಳೆಯಾಗಲಿದೆ & ಎಲ್ಲೆಲ್ಲಿ ಶಾಖದ ಅಲೆ ಇದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಉತ್ತರ - ದಕ್ಷಿಣ ವಾಯುಭಾರ ಕುಸಿತವು ಈಗ ಮೇಲಿನ ಚಂಡಮಾರುತದ ಪರಿಚಲನೆಯಿಂದ ಆಗ್ನೇಯ ರಾಜಸ್ಥಾನ ಮತ್ತು ನೆರೆಹೊರೆಗಳ ಮೇಲೆ ಗುಜರಾತ್, ಮಹಾರಾಷ್ಟ್ರ ಹಾಗೂ ಕರ್ನಾಟಕದ ಒಳನಾಡಿನಾದ್ಯಂತ ದಕ್ಷಿಣ ತಮಿಳುನಾಡಿನ ವರೆಗೆ ಸರಾಸರಿ ಸಮುದ್ರಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಲಿಸುತ್ತಿದೆ. ಹೀಗಾಗಿ, ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ನಾಲ್ಕೈದು ದಿನ ಮಳೆ ಇರಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ. ಭೀಕರ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
ಭಾರತೀಯ ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಇನ್ನು ಮಲೆನಾಡಿನ ಶಿವಮೊಗ್ಗ, ಕೊಡಗು. ದಕ್ಷಿಣ ಒಳನಾಡಿನ ಮೈಸೂರು, ರಾಮನಗರ,ಮಂಡ್ಯ ಹಾಗೂ ಕೋಲಾರದಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ.
4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಇನ್ನು ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಲ್ಲಿ ಭಾರೀ ಮಳೆಯಾಗಲಿದ್ದು. ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 04: ಇಂದು ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇನ್ನು ಚಿಕ್ಕಮಗಳೂರು, ಬಳ್ಳಾರಿ, ಹಾಸನ, ಮಂಡ್ಯ, ಮೈಸೂರು, ಕೊಡಗು, ವಿಜಯನಗರ, ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ.
ಕರ್ನಾಟಕದ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಭಾಗದಲ್ಲಿ ಗಾಳಿಯ ವೇಗವು 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications