ಕರ್ನಾಟಕದಲ್ಲಿ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಇಂದು ಕೂಡ ಶಾಲೆ ಕಾಲೇಜಿಗಳಿಗೆ ರಜೆ

ಬೆಂಗಳೂರು, ಜುಲೈ 19: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಗುಡ್ಡ ಕುಸಿತ ಹಾಗೂ ಗೋಡೆ ಕುಸಿತದಿಂದ ಜನತೆ ಹೈರಾಣಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆರಾಯನ ಅಬ್ಬರ ಜೋರಾಗುತ್ತಿದ್ದು, ಉಡುಪಿ ಮತ್ತು ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಇನ್ನೂ ಹಲವೆಡೆ ಶಾಲೆಗಳು-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಇಂದು ಕೂಡ ಜಿಲ್ಲಾಧಿಕಾರಿಗಳು, ಡಿಡಿಪಿಐಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

Heavy Rains In Karnataka Holidays For Schools And Colleges Will Today In These Districts

ಶಿವಮೊಗ್ಗ ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಿ ಆಯಾ ತಾಲೂಕಿನ ತಹಶೀಲ್ದಾರ್‌ಗಳಿಂದ ಆದೇಶಿಸಲಾಗಿದೆ.

ಇನ್ನು, ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್​ಆರ್​ ಪುರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು, ಚಿಕ್ಕಮಗಳೂರು ನಗರ, ಅಂಬಳೆ ಹೋಬಳಿ, ಲಕ್ಯಾ ಹೋಬಳಿ ‌ಹೊರತು ಪಡಿಸಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ಇಂದು ರಜೆ ಘೋಷಿಸಿ ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಐಟಿಐ, ಯುಜಿ, ಪಿಜಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ. ಇನ್ನು ಕೊಡಗಿನಲ್ಲೂ ಭಾರಿ ಗಾಳಿ ಮಳೆ ಮುಂದುವರೆದಿದ್ದು ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ ನಾಳೆ ಒಂದು ದಿನ ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಘೋಷಣೆ ಮಾಡಿದ್ದಾರೆ.

ಇನ್ನೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯೂ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ 19 ಮತ್ತು 20ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+