Karnataka Rains: ಬೆಂಗಳೂರು ಸೇರಿ ವಿವಿಧೆಡೆ ಮುಂದಿನ 48 ಗಂಟೆ ಭರ್ಜರಿ ಮಳೆ!
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಚಳಿ ಜಾಸ್ತಿ ಆಗಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವುದರಿಂದ ಪದೇ ಪದೇ ಮಳೆಯಾಗುತ್ತಿದೆ. ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿದಿದೆ. ಕರ್ನಾಟಕದಲ್ಲೂ ಮಳೆಯ ಆರ್ಭಟ ಇರಲಿದೆ.
ಎರಡು ದಿನ ಮಳೆ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಜನವರಿ 2 ಹಾಗೂ ಜನವರಿ 3ಕ್ಕೆ ಭರ್ಜರಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಹಾಗೂ ಮಳೆನಾಡು ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.

ಎಲ್ಲೆಲ್ಲಿ ಮಳೆ: ಇನ್ನು ಎರಡು ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ, ಮಡಿಕೇರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ ಹಾಗೂ ದಾವಣಗೆರೆ ಭಾಗದಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲೂ ಮಳೆ ಆರ್ಭಟ ಇರಲಿದೆ. ಬೆಳಗಾವಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆ ಆಗಲಿದೆ ಎಂದು ಮುನ್ನೆಚ್ಚರಿಕೆ ಕೊಡಲಾಗಿದೆ.
ಇನ್ನು ಬಂಗಾಳಕೊಲ್ಲಿಯಲ್ಲಿ ಸೈಕ್ಲೋನಿಕ್ ಪರಿಚಲನೆ ಬಂಗಾಳಕೊಲ್ಲಿಯಲ್ಲಿ ಮುಂದುವರಿದೆ. ಇದೀಗ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ ಎಂದು ಐಎಂಡಿ ಹೇಳಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ಉಷ್ಣಾಂಶವು 12.8 ಡಿಗ್ರಿ ಸೆಲ್ಸಿಯಸ್ ಧಾರವಾಡದಲ್ಲಿ ದಾಖಲಾಗಿದೆ.
ತಾಪಮಾನದ ಮುನ್ಸೂಚನೆ: ರಾಜ್ಯದಲ್ಲಿ ಜನವರಿ 7ರ ವರೆಗೆ ಕೆಲವು ಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ಆದರೆ ಮಳೆಯ ಜೊತೆ ಜೊತೆಗೆ ಚಳಿಯೂ ಮುಂದುವರಿಲಿದೆ. ಕೆಲವು ಭಾಗದಲ್ಲಿ ಅಕಾಲಿಕ ಮಳೆಯಿಂದ ಚಳಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಇಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ.
ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ: ಬೆಂಗಳೂರಿನಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಬೆಳಿಗ್ಗೆ ಸಮಯದಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications