Karnataka Dam Water level: ಭಾರೀ ಮಳೆ: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ!

ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಸೈಕ್ಲೋನ್ ಪ್ರಭಾವ ಹಾಗೂ ವಾಯುಭಾರ ಕುಸಿತ ಕಾರಣಕ್ಕೆ ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದರಿಂದ ಕರ್ನಾಟಕ ವಿವಿಧ ಜಲಾಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ನೆರೆಯ ಮಹಾರಾಷ್ಟ್ರದಲ್ಲೂ ಈ ಬಾರಿ ಉತ್ತಮ ಮಳೆ ಆಗಿರುವುದರಿಂದ ಉತ್ತರ ಕರ್ನಾಟಕ ಭಾಗದ ಜಲಾಶಯಗಳಿಗೂ ಜೀವಕಳೆ ಮೂಡಿದೆ. ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ.ವರೆಗೆ ವಿಸ್ತರಿಸಿರುವ ವಾಯುವ್ಯ ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಇದರ ಪ್ರಭಾವವು ಅಕ್ಟೋಬರ್ 21 ರ ಸುಮಾರಿಗೆ ಬಂಗಾಳಕೊಲ್ಲಿಯ ಆಗ್ನೇಯ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ, ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water level Heavy rains Water level of major reservoirs in Karnataka increases On oct 20

ಮಲಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50

ಇಂದಿನ ಮಟ್ಟ: 2,079.50

ಒಳಹರಿವು: 394

ಹೊರಹರಿವು: 394

----------

ಘಟಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175

ಇಂದಿನ ಮಟ್ಟ: 2,174.81

ಒಳಹರಿವು: 335

ಹೊರಹರಿವು: 180

----------

ಸೂಪಾ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 564

ಇಂದಿನ ಮಟ್ಟ: 558.72

ಒಳಹರಿವು: 1,069.17

ಹೊರಹರಿವು: 4,724.93 ಕ್ಯೂಸೆಕ್ಸ್‌ಗಳಲ್ಲಿ

----------

ತುಂಗಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633

ಇಂದಿನ ಮಟ್ಟ: 1,625.60

ಒಳಹರಿವು: 4,781

ಹೊರಹರಿವು: 10,236

----------

ಆಲಮಟ್ಟಿ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6

ಇಂದಿನ ಮಟ್ಟ: 519.59

ಒಳಹರಿವು:12,520

ಹೊರಹರಿವು: 12,520

ವಿವಿಧ ಭಾಗದಲ್ಲಿ ಪ್ರವಾಹ ಪರಿಸ್ಥಿತಿ: ಇನ್ನು ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಈ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇನ್ನೂ ಒಂದು ವಾರದ ಅವಧಿಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+