Heavy Rain Alert: ರಾಜ್ಯದಲ್ಲಿ ಧಾರಾಕಾರ ಮಳೆ: ಈ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!
Heavy Rain Alert: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಮತ್ತೆ ಚುರುಕು ಪಡೆದುಕೊಂಡಿದ್ದು ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ರಾಜ್ಯದ ಪ್ರಮುಖ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಹಾಗೂ ಇನ್ನು ಎಷ್ಟು ದಿನ ಮಳೆ ಅಬ್ಬರ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ನಗರ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ನೈಋತ್ಯ ಮಾನ್ಸೂನ್ ಪ್ರಭಾವ ಇದೀಗ ಅಲ್ಪ ಪ್ರಮಾಣದಲ್ಲಿ ಇಳಿಕೆ ಆಗಿದೆ. ಆದರೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಇನ್ನೊಂದು ವಾರದ ವರೆಗೆ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಕರ್ನಾಟಕದ ವಿವಿಧ ಭಾಗದಲ್ಲಿ ಜುಲೈ 14ರ ವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ರಣಭೀಕರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಭಾಗದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲೂ ಮಳೆ: ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲೂ ಮಳೆ ಅಬ್ಬರ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು. ಇಂದು ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬೀದರ್, ಧಾರವಾಡ, ಕಲಬುರಗಿ ಹಾಗೂ ಗದಗ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ. ಅಲ್ಲದೇ ಹಾವೇರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ವರದಿ ಉಲ್ಲೇಖಿಸಿದೆ.
ಇನ್ನು ದಕ್ಷಿಣ ಕರ್ನಾಟಕದ ಕೋಲಾರ, ಮೈಸೂರು, ಹಾಸನ ಹಾಗೂ ಮಂಡ್ಯ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ: ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು. ಚದುರಿದಂತೆ ಮಳೆ ಆಗಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಐಎಂಡಿ ರಿಪೋರ್ಟ್ ತಿಳಿಸಿದೆ.
ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕದ ಕರಾವಳಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.












Click it and Unblock the Notifications