ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ-ಗಣೇಶ ಹಬ್ಬಕ್ಕೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಆಗಸ್ಟ್ 30: ಗೌರಿ-ಗಣೇಶ ಹಬ್ಬದ ಆಸು-ಪಾಸು ರಾಜ್ಯದ ಹಲವೆಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದಾಗಿ ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯದ ಹಲವು ಕಡೆ ಉತ್ತಮ ಮಳೆ ಆಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಜೋರಾಗಿಯೇ ಇರಲಿದೆ.

ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವರುಣನ ಆರ್ಭಟಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವರುಣನ ಆರ್ಭಟ

Recommended Video

ಇವರ ಜೀವ ಉಳಿಸಿದ್ದು ಈ ಸೇತುವೆ..! | Flood

ಬಂಗಾಳಕೊಲ್ಲಿಯ ಆಂಧ್ರ ಪ್ರದೇಶದ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರಿಂದ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ನಿಲಾಖೆ ಹೇಳಿದೆ.

Heavy Rains In Several Parts Of Karnataka in September First Week

ಮಲೆನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸಾಧಾರಣವಾಗಿ ಇರಲಿದೆ ಎಂದು ಸಹ ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕ : ಬರಪೀಡಿತ ಮೂರು ಜಿಲ್ಲೆಗಳಲ್ಲಿ ಮೋಡ ಬಿತ್ತನೆಕರ್ನಾಟಕ : ಬರಪೀಡಿತ ಮೂರು ಜಿಲ್ಲೆಗಳಲ್ಲಿ ಮೋಡ ಬಿತ್ತನೆ

ಈಗಾಗಲೇ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳು ಪ್ರವಾಹದಿಂದ ತತ್ತರಿಸಿ ಈಗಷ್ಟೆ ಸಾಮಾನ್ಯ ಸ್ಥಿತಿಯತ್ತ ಮರಳುತ್ತಿವೆ. ಇಂತಹಾ ಸಮಯದಲ್ಲಿ ಮತ್ತೆಯ ಎಚ್ಚರಿಕೆ ನೀಡಿರುವುದು ಉತ್ತರ ಕರ್ನಾಟಕ ಭಾಗದ ಜನರನ್ನು ಆತಂಕಕ್ಕೆ ತಳ್ಳಿದೆ.

English summary
Metrological department warned heavy rains in several parts of Karnataka September first week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X