ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್‌, ಹಲವು ಕಡೆ ಶಾಲೆಗಳಿಗೆ ರಜೆ

ಬೆಂಗಳೂರು, ಆಗಸ್ಟ್‌ 05: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಕೆಲವು ಭಾಗಗಳಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಆಗಿದೆ.

ಬೆಳಗಾವಿ, ಬಾಗಲಕೋಟೆಗಳಲ್ಲಿ ಭಾರಿ ಮಳೆಯ ಪರಿಣಾಮ ಆಗಸ್ಟ್‌ 6 ರಿಂದ 8ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ ರಾಮದುರ್ಗಾ ತಾಲ್ಲೂಕು ಹೊರತುಪಡಿಸಿ ಇನ್ನುಳಿದ ತಾಲ್ಲೂಕುಗಳಲ್ಲಿ ಎರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬಾಗಲಕೋಟೆಯಲ್ಲಿ ಸಹ ಮಳೆ ಜೋರಾಗಿದ್ದು ಆಗಸ್ಟ್‌ 6 ಮತ್ತು 7 ರಂದು ಎರಡು ತಾಲ್ಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಕಾರಣ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ಸೊರಬ ತಾಲ್ಲೂಕುಗಳಲ್ಲಿ ಮಳೆಯ ಕಾರಣದಿಂದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Heavy rains in some part of Karnataka, orange alert in coastal area

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕೆಲವು ಕರಾವಳಿ ಭಾಗಗಳಲ್ಲಿ ಹವಾಮಾನ ಇಲಾಖೆಯು ನಾಳೆಯಿಂದ ಎರಡು ಮೂರು ದಿನಗಳ ಕಾಲ ಆರೆಂಜ್ ಅಲರ್ಟ್‌ ಘೋಷಿಸಿದ್ದು, ಆಗಸ್ಟ್‌ 9 ರ ನಂತರ ರೆಡ್‌ ಅಲರ್ಟ್‌ ಘೋಷಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+