ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್‌, ಹಲವು ಕಡೆ ಶಾಲೆಗಳಿಗೆ ರಜೆ

|
Google Oneindia Kannada News

ಬೆಂಗಳೂರು, ಆಗಸ್ಟ್‌ 05: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಕೆಲವು ಭಾಗಗಳಲ್ಲಿ ಭಾರಿ ಪ್ರಮಾಣದ ಮಳೆ ಆಗುತ್ತಿದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಆಗಿದೆ.

ಬೆಳಗಾವಿ, ಬಾಗಲಕೋಟೆಗಳಲ್ಲಿ ಭಾರಿ ಮಳೆಯ ಪರಿಣಾಮ ಆಗಸ್ಟ್‌ 6 ರಿಂದ 8ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ ರಾಮದುರ್ಗಾ ತಾಲ್ಲೂಕು ಹೊರತುಪಡಿಸಿ ಇನ್ನುಳಿದ ತಾಲ್ಲೂಕುಗಳಲ್ಲಿ ಎರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗಿನಲ್ಲಿ ಬಿರುಸಾಗಿದೆ ಮಳೆ; ಅಲ್ಲಲ್ಲಿ ಅನಾಹುತಕೊಡಗಿನಲ್ಲಿ ಬಿರುಸಾಗಿದೆ ಮಳೆ; ಅಲ್ಲಲ್ಲಿ ಅನಾಹುತ

ಬಾಗಲಕೋಟೆಯಲ್ಲಿ ಸಹ ಮಳೆ ಜೋರಾಗಿದ್ದು ಆಗಸ್ಟ್‌ 6 ಮತ್ತು 7 ರಂದು ಎರಡು ತಾಲ್ಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಕಾರಣ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ಸೊರಬ ತಾಲ್ಲೂಕುಗಳಲ್ಲಿ ಮಳೆಯ ಕಾರಣದಿಂದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Heavy rains in some part of Karnataka, orange alert in coastal area

ಬಾಗಲಕೋಟೆ : ಕೃಷ್ಣಾ ನದಿ ಪ್ರವಾಹ, ಸಂತ್ರಸ್ತರ ರಕ್ಷಣೆ ಬಾಗಲಕೋಟೆ : ಕೃಷ್ಣಾ ನದಿ ಪ್ರವಾಹ, ಸಂತ್ರಸ್ತರ ರಕ್ಷಣೆ

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕೆಲವು ಕರಾವಳಿ ಭಾಗಗಳಲ್ಲಿ ಹವಾಮಾನ ಇಲಾಖೆಯು ನಾಳೆಯಿಂದ ಎರಡು ಮೂರು ದಿನಗಳ ಕಾಲ ಆರೆಂಜ್ ಅಲರ್ಟ್‌ ಘೋಷಿಸಿದ್ದು, ಆಗಸ್ಟ್‌ 9 ರ ನಂತರ ರೆಡ್‌ ಅಲರ್ಟ್‌ ಘೋಷಿಸಿದೆ.

English summary
Heavy rains in North Karnataka and coastal Karnataka. Orange alert issued in coastal area. many districts declared leave to schools and colleges due to rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X