Rain Alert: ಈ ಭಾಗಗಳಲ್ಲಿ 6 ದಿನ ಮಳೆ ಆರ್ಭಟ ಜೋರು: ಐಎಂಡಿ ರಿಪೋರ್ಟ್!
Rain Alert: ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ದೇಶದಾದ್ಯಂತ ಭಾರೀ ಮಳೆ ಆಗುತ್ತಿದೆ. ಇನ್ನೊಂದು ವಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರಾಖಂಡ, ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ ಹಾಗೂ ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಧಾರಾಕಾರ ಮಳೆ ಆಗಲಿದ್ದು. ಈ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 8ರಂದು ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗಲಿದೆ.
ದೆಹಲಿ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ದೆಹಲಿ-ಎನ್‌ಸಿಆರ್ ಭಾಗದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಭಾಗದಲ್ಲಿ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ದೆಹಲಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು. ದೆಹಲಿ ಹಾಗೂ ದೆಹಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ತಾಪಮಾನ ಇಳಿಕೆಯಾಗಿದೆ. ವಿವಿಧ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಇನ್ನು ಜುಲೈ 10 ರವರೆಗೆ ಮಧ್ಯಪ್ರದೇಶದಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 8ಕ್ಕೆ ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆ ಆಗಲಿದೆ.

ಇನ್ನು ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಕರ್ನಾಟಕದ ಮೇಲೂ ಮಳೆ ಪ್ರಭಾವ ಬೀರಿದೆ. ಇನ್ನು ಜುಲೈ 10 ರವರೆಗೆ ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಹಾಗೂ ಹರಿಯಾಣ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ಮಳೆ ಅಬ್ಬರ: ಮುಂದಿನ ಒಂದು ವಾರದ ಅವಧಿಗೆ ಉತ್ತರ ಭಾರತ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಗೋವಾ, ಮಹಾರಾಷ್ಟ್ರ, ಗುಜರಾತ್ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ.
ದಕ್ಷಿಣ ಭಾರತದಲ್ಲಿ ಮುಂದುವರಿದ ಮಳೆ ಅಬ್ಬರ: ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಮಳೆ ಆರ್ಭಟ ಜೋರಾಗಿದೆ. ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಮಳೆ ಆರ್ಭಟ ಜೋರಾಗಿದೆ. ಉಳಿದಂತೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ ಭಾಗದಲ್ಲಿ ಜುಲೈ 9 ರವರೆಗೆ ಬಿಸಿಲು ಇರಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ.
ಈ ಭಾಗದ ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ರಾಜ್ಯಗಳ ಕರಾವಳಿ ಭಾಗದಲ್ಲಿ ಸುಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಗುಜರಾತ್ ಹಾಗೂ ಗೋವಾ ರಾಜ್ಯದ ಮೀನುಗಾರಿಕೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.












Click it and Unblock the Notifications