Rain Alert: ಕರ್ನಾಟಕದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!
Karnataka Rains: ಕರ್ನಾಟಕದ ವಿವಿಧ ಭಾಗದಲ್ಲಿ ನವೆಂಬರ್ 22ಕ್ಕೆ ಮಳೆಯಾಗಲಿದೆ ಮಳೆ ಇನ್ನೂ ಆರು ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸಿನೊಪ್ಟಿಕ್ ಹವಾಮಾನ ಲಕ್ಷಣ ಬದಲಾಗುತ್ತಿದೆ. ಹಿಂದೂ ಮಹಾಸಾಗರ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದ ಮೇಲಿನ ವಾಯು ಚಂಡಮಾರುತವು ನವೆಂಬರ್ 23ರ ವೇಳೆಗೆ (ಶನಿವಾರ) ಬಂಗಾಳ ಕೊಲ್ಲಿ ಅಲ್ಲಿಂದ ಪಶ್ಚಿಮ - ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ವಾಯು ಭಾರ ಕುಸಿತವಾಗಲಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವಿಚಿತ್ರ ಹವಾಮಾನ ಇದೆ. ಒಂದು ಕಡೆ ಚಳಿ ಹೆಚ್ಚಾಗುತ್ತಿದ್ದರೂ, ಮಧ್ಯಾಹ್ನ 12 ಗಂಟೆಯ ವೇಳೆಗೆ ಸುಡುಬಿಸಿಲು ಪ್ರಾರಂಭವಾಗುತ್ತಿದೆ. ಈ ನಡುವೆ ರಾಜ್ಯದ ವಿವಿಧ ಭಾಗದಲ್ಲಿ ಮಳೆಯೂ ಮುಂದುವರಿದಿದೆ. ಇನ್ನೂ ಆರರಿಂದ ಏಳು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಇನ್ನು ಆಗ್ನೇಯ ಅರೇಬಿಯನ್ ಸಮುದ್ರದ ಕೇರಳ ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತ ಪರಿಚಲನೆ ಕಡಿಮೆಯಾಗಿದೆ.
ಕರ್ನಾಟಕದಲ್ಲಿ ಶುಕ್ರವಾರದಿಂದ (ನವೆಂಬರ್ 21) ಮುಂದಿನ ಬುಧವಾರದ (ನವೆಂಬರ್ 27)ರ ವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ಮಳೆ: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಕೊಡಗು ಹಾಗೂ ಹಾಸನ ಸೇರಿದಂತೆ ವಿವಿಧೆಡೆ ಇನ್ನೂ ಆರು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಗಳು ಇಲ್ಲ. ಅಲ್ಲದೇ ಮೀನುಗಾರರಿಗೂ ಯಾವುದೇ ಮುನ್ನೆಚ್ಚರಿಕೆಯನ್ನೂ ನೀಡಿಲ್ಲ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಈಶಾನ್ಯ ಮುಂಗಾರು ದುರ್ಬಲವಾಗಿತ್ತು. ಕರ್ನಾಟಕದ ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ.
ಬೆಂಗಳೂರು ಹವಾಮಾನ ಹೇಗಿದೆ ?
ಬೆಂಗಳೂರಲ್ಲೂ ಮಳೆಯಾಗಲಿದ್ದು, ಇಂದು ಒಣಹವೆ ಮುಂದುವರಿಯಲಿದೆ. ಮುಂದಿನ 48 ಗಂಟೆಯ ಅವಧಿಯಲ್ಲಿ ಸಾಮನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದೆ. ಕೆಲವು ಭಾಗದಲ್ಲಿ ಬೆಳಿಗ್ಗೆ ಸಮಯದಲ್ಲಿ ಮಂಜು ಆವರಿಸಿರುವ ಸಾಧ್ಯತೆ ಇರುತ್ತದೆ. ಗರಿಷ್ಠ ತಾಪಮಾನವು ನವೆಂಬರ್ 22 ಹಾಗೂ ನವೆಂಬರ್ 23ಕ್ಕೆ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿಂದತೆ ಬೆಂಗಳೂರಿನ ವಾತಾವರಣದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications