ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು, ಮೇ 19: ಕೊಡಗು ಜಿಲ್ಲೆಯ ಭಾಗಮಂಡಲ ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಸೋಮವಾರ ಭಾರಿ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಸುಳ್ಯ, ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಿನಲ್ಲಿ ಅತಿ ಹೆಚ್ಚು ಅಂದ್ರೆ 40.2 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನ ಅಜ್ಜಂಪುರ, ಶಿವಮೊಗ್ಗದ ಅರಸಾಳು, ರಾಮನಗರದ ಚನ್ನಪಟ್ಟಣ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯಲ್ಲಿ 6 ಸೆ.ಮೀ ಮಳೆಯಾಗಿದೆ. ಮೂಡುಬಿದಿರೆ, ಪುತ್ತೂರು, ಮಂಗಳೂರು, ಮದ್ದೂರು, ಮಳವಳ್ಳಿ, ಮಡಿಕೇರಿ, ಚನ್ನಗಿರಿ ಮತ್ತು ಬೇಲೂರಿನಲ್ಲಿ 5 ಸೆ.ಮೀ ಮಳೆಯಾಗಿದೆ.

Rain Thundershowers very likely to occur at most places over Coastal Karnataka in 24 hours

ಸಕಲೇಶಪುರ, ಹೊಳೆನರಸೀಪುರ, ಬಾಳೆಹೊನ್ನೂರು, ಹೊಸನಗರ, ಕೃಷ್ಣರಾಜಪೇಟೆ, ನಂಜನಗೂಡು, ಕನಕಪುರ, ಕುಶಾಲನಗರ, ತಿ.ನರಸೀಪುರ ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+