Karnataka Rain: ಉತ್ತರ ಕರ್ನಾಟಕ ಮಂದಿಗೆ ಗುಡ್ ನ್ಯೂಸ್... ರಾಜ್ಯದೆಲ್ಲೆಡೆ ಅಕ್ಟೋಬರ್‌ವರೆಗೂ ಮಳೆ
ಬೆಂಗಳೂರು ಸೆಪ್ಟೆಂಬರ್ 20: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಮಳೆ ಕಡಿಮೆಯಾಗುತ್ತಿದ್ದು ಚಳಿ ಹೆಚ್ಚಾಗುತ್ತಿದೆ. ಕಳೆದ ದಿನ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಿದ್ದು ಇಂದೂ ಕೂಡ ಇದೇ ವಾತಾವರಣ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ದಿನ ರಾತ್ರಿ ಸಾಧಾರಣ ಮಳೆಯಾಗಿದ್ದು ಇಂದು ವಾತಾವರಣ ತಂಪಾಗಿದೆ. ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಸೆಪ್ಟೆಂಬರ್ ನಂತರ ಮಳೆ ಪ್ರಮಾಣ ಇನ್ನಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಹೌದು.... ಇಂದು ಹಾಗೂ ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಸಾಧಾರಣದಿಂದ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮಲೆನಾಡು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಇನ್ನೂ ಕಳೆದ ದಿನ ರಾತ್ರಿ ಕೊಂಚ ಮಳೆಯಿಂದಾಗಿ ಬೆಂಗಳೂರಿನಲ್ಲಿ ಹಿತವಾದ ವಾತಾವರಣವಿದ್ದು ಇಂದು ಮೋಡ ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮಲೆನಾಡು ಭಾಗಗಳಲ್ಲಿಂದು ಸಾಧಾರಣ ಮಳೆ ಬೀಳಲಿದೆ. ಅಲ್ಲದೆ ಇಂದು (ಸೆ.20) ದಕ್ಷಿಣ ಕನ್ನಡ, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರೆಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸೂಚನೆ ಇದೆ.
ಇನ್ನೂ ಉತ್ತರ ಕರ್ನಾಟಕದ ಜನರಿಗೆ ಐಎಂಡಿ ಸಿಹಿ ಸುದ್ದಿಯನ್ನು ನೀಡಿದೆ. ಈ ಭಾಗದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ಉತ್ತರ ಕರ್ನಾಟಕ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರೆಡು ಕಡೆ ಸಾಧಾರಣ ಮಳೆ ಬೀಳಲಿದೆ.
ರಾಯಚೂರು, ವಿಜಯಪುರ, ಬೆಳಗಾವಿ ಸೇರಿದಂತೆ ಉಡುಪಿ, ದಕ್ಷಿಣ ಕನ್ನಡ, ಕಲಬುರ್ಗಿ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ನಾಳೆ (ಸೆ.22) ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬಳ್ಳಾರಿ ಜಿಲ್ಲೆಯ ಒಂದೆರೆಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದ್ದು, ಕೊಪ್ಪಳ, ಗದಗ ಜಿಲ್ಲೆಗಳಲ್ಲೂ ನಾಳೆ (ಸೆ.22) ವರುಣ ಧರೆಗಿಳಿಯಲಿದ್ದಾನೆ. ಅಲ್ಲದೆ ಚಿತ್ರದುರ್ಗ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರೆಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇನ್ನೂ ರಾಯಚೂರು, ವಿಜಯಪುರ, ಕೊಪ್ಪಳ, ದಕ್ಷಿಣ ಕನ್ನಡ, ಕಲಬುರ್ಗಿ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ತುಮಕೂರು ಬಾಗಲಕೋಟೆ, ಗದಗ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ನಾಡಿದ್ದು (ಸೆ.23) ಸಾಧಾರಣದಿಂದ ಹಗುರ ಮಳೆ ಬೀಳಲಿದೆ.
ಜೊತೆಗೆ ಕೊಪ್ಪಳ, ರಾಯಚೂರು, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ವಿಜಯಪುರ, ಯಾದಗಿರಿ, ಕಲಬುರ್ಗಿ, ಹಾವೇರಿ ಹಲವು ಸ್ಥಳಗಳಲ್ಲಿ (ಸೆ.24) ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ರಾಮನಗರ, ಶಿವಮೊಗ್ಗ, ದಾವರಣಗೆರೆ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಗಳಲ್ಲೂ ಮಳೆ ಕಾಣಿಸಿಕೊಳ್ಳಲಿದೆ.
ವಿಜಯಪುರ, ಯಾದಗಿರಿ, ಉಡುಪಿ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ತುಮಕೂರು, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಬುಧವಾರ(ಸೆ.25) ಸಾಧಾರಣ ಮಳೆಯಾಗಲಿದ್ದು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ ಎನ್ನಲಾಗಿದೆ.












Click it and Unblock the Notifications